Breaking News

ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಹುದ್ದೆಗಳು ಖಾಲಿ: ಕೇಂದ್ರ ಸರ್ಕಾರ

Spread the love

ವದೆಹಲಿ: ಕೇಂದ್ರ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಸುಮಾರು 9.79 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸರ್ಕಾರ ಬುಧವಾರ ಲೋಕಸಭೆಗೆ ಮಾಹಿತಿ ನೀಡಿದೆ.

ಈ ಕುರಿತು ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದರು.

 

ವೆಚ್ಚ ಇಲಾಖೆಯ ವಾರ್ಷಿಕ ವರದಿಯ ಪ್ರಕಾರ, 2021 ಮಾರ್ಚ್ 1ರಂತೆ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು/ಇಲಾಖೆಗಳಲ್ಲಿ 9,79,327 ಹುದ್ದೆಗಳು ಖಾಲಿ ಇವೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

 

ಖಾಲಿ ಹುದ್ದೆಗಳನ್ನು ಸಕಾಲಕ್ಕೆ ಭರ್ತಿ ಮಾಡಲಾಗುತ್ತದೆ. ಈ ಸಂಬಂಧ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

1,472 ಐಎಎಸ್ ಹುದ್ದೆಗಳು ಖಾಲಿ…
ಮಗದೊಂದು ಪ್ರಶ್ನೆಗೆ ಉತ್ತರಿಸಿದ ಜಿತೇಂದ್ರ ಸಿಂಗ್, ಭಾರತೀಯ ಆಡಳಿತ ಸೇವೆಯಲ್ಲಿ (ಐಎಎಸ್) 1,472 ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದರು


Spread the love

About Laxminews 24x7

Check Also

ಗೃಹ ಕಾರ್ಮಿಕರಿಗೆ ಶೀಘ್ರದಲ್ಲೇ ಶಾಸನಬದ್ಧ ರಕ್ಷಣೆ, ಕನಿಷ್ಠ ವೇತನ; ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಸರ್ಕಾರದ ಸಿದ್ಧತೆ

Spread the love ಬೆಂಗಳೂರು: ರಾಜ್ಯಾದ್ಯಂತ ಸುಮಾರು 8 ಲಕ್ಷ ಗೃಹ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದ ಮಹತ್ವದ ಕಾನೂನನ್ನು ಜಾರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ