Breaking News

ಬೆಳಗಾವಿ ಗಡಿ ವಿವಾದ, ಸದ್ಯಕ್ಕಿಲ್ಲ ಗಡಿಬಿಡಿ :ಅಮಿತ್ ಶಾ’

Spread the love

ವದೆಹಲಿ : ಬೆಳಗಾವಿ ಗಡಿ ವಿವಾದವನ್ನು ಬಗೆಹರಿಸಲು ಶೀಘ್ರವೇ 6 ಮಂದಿ ಕೇಂದ್ರ ಸಚಿವರು ಇರುವ ತಟಸ್ಥ ಸಮಿತಿ ರಚಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಇಂದು ಗಡಿ ವಿವಾದಕ್ಕೆ ಸಂಬಂಧಪಟ್ಟಂತೆ ನವದೆಹಲಿಯಲ್ಲಿ ನಡೆದ ಮಹಾ ಸಿಎಂ ಮತ್ತು ಕರ್ನಾಟಕ ಸಿಎಂಗಳ ನಡುವೆ ನಡೆದ ಸಭೆಯಲ್ಲಿ ಉಭಯ ನಾಯಕರುಗಳಿಂದ ಮಾಹಿತಿಯನ್ನು ಪಡೆದುಕೊಂಡು ನಂತರ ಮಾತನಾಡಿದ ಅಮಿತ್ ಶಾ ಈ ಬಗ್ಗೆ ಸುಪ್ರಿಂಕೋರ್ಟ್ ಅಂತಿಮ ಆದೇಶ ಹೊರಡಿಸಲಿದೆ.

ಬೆಳಗಾವಿ ಗಡಿ ವಿಚಾರದಲ್ಲಿ ಯಾವುದೇ ಗಡಿಬಿಡಿ ಬೇಡ ಅಲ್ಲಿವರೆಗೂ ಸುಮ್ಮನೆ ಇರಿ ಎಂದು ಸೂಚನೆ ನೀಡಿದ್ದಾರೆ.

ಬೆಳಗಾವಿ ಗಡಿ ವಿವಾದವನ್ನು ಬಗೆಹರಿಸಲು ಶೀಘ್ರವೇ 6 ಮಂದಿ ಕೇಂದ್ರ ಸಚಿವರು ಇರುವ ತಟಸ್ಥ ಸಮಿತಿ ರಚಿಸಲಾಗುವುದು, ಅಲ್ಲಿಯವರೆಗೂ ನೀವು ಸುಮ್ಮನಿರಿ ಎಂದು ಇಬ್ಬರು ಸಿಎಂಗಳಿಗೆ ಅಮಿತ್ ಶಾ ಸೂಚನೆ ನೀಡಿದ್ದಾರೆ. ಇಬ್ಬರು ಕೂಡ ಸುಪ್ರಿಂಕೋರ್ಟ್ ನಿಂದ ಬರೋ ಅಂತಿಮ ತೀರ್ಪಿನ ತನಕ ತಮ್ಮ ತಮ್ಮ ಜವ್ದಾರಿಯನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇದೇ ವೇಳೇ ಸಭೆ ಬಳಿಕ ಮಾತನಾಡಿದ ಗೃಹ ಸಚಿವ ಅಮಿತ್ ಶಾ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಸಮಸ್ಯೆಗಳನ್ನು ಸಾಂವಿಧಾನಿಕ ವಿಧಾನಗಳಿಂದ ಮಾತ್ರ ಇತ್ಯರ್ಥಗೊಳಿಸಬಹುದು, ರಸ್ತೆಯಲ್ಲಿ ಅಲ್ಲ ಅಂತ ಹೇಳಿದರು. ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ. ಗಡಿಯಲ್ಲಿ ಶಾಂತಿಯನ್ನು ಸ್ಥಾಪಿಸಬೇಕಿದೆ. ನೀವೆಲ್ಲರೂ ಇದಕ್ಕೆ ಸಹಕರಿಸ್ತೀರಿ ಎಂಬ ವಿಶ್ವಾಸ ನನಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.


Spread the love

About Laxminews 24x7

Check Also

ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಕಡ್ಡಾಯಕ್ಕೆ ತಡೆಯಾಜ್ಞೆ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Spread the loveಧಾರವಾಡ: ಸಾರ್ವಜನಿಕ ಸ್ಥಳದಲ್ಲಿ ಖಾಸಗಿ ಸಂಸ್ಥೆಗಳ ಅನುಮತಿ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿದ್ದ ಧಾರವಾಡ ಹೈಕೋರ್ಟ್ ಏಕ ಸದಸ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ