Breaking News

ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಡಿಸೆಂಬರ್ 23 ರಂದು ಸುವರ್ಣಸೌಧದವರೆಗೆ ಪಾದಯಾತ್ರೆ

Spread the love

ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಡಿಸೆಂಬರ್ 23 ರಂದು ಯಡೂರ ವೀರಭದ್ರೇಶ್ವರ ದೇವಸ್ಥಾನದಿಂದ ಬೆಳಗಾವಿ ಸುವರ್ಣಸೌಧದವರೆಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮೀತಿಯ ಅಧ್ಯಕ್ಷ ಎಸ್.ವೈ.ಹಂಜಿ ಹೇಳಿದರು.

ಚಿಕ್ಕೋಡಿಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್.ವೈ.ಹಂಜಿ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಮಾಡುವಂತೆ ಕಳೆದ ಹಲವಾರು ವರ್ಷಗಳಿಂದ ಹೋರಾಟವನ್ನು ಮಾಡಿಕೊಂಡು ಬರುತ್ತಿದೇವೆ. ಆದರೆ ಇನ್ನೂವರೆಗೆ ಚಿಕ್ಕೋಡಿ ಜಿಲ್ಲೆ ಆಗದೇ ಇರುವುದು ವಿಪಯಾರ್ಪಸದ ಸಂಗತಿ.

ಡಿಸೆಂಬರ್ ‌19 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ‌ ಚಳಿಗಾಲ ಅಧಿವೇಶನ ಪ್ರಾರಂಭವಾಗಲಿದೆ. ಇಡೀ ಸರ್ಕಾರವೇ ಬೆಳಗಾವಿಗೆ ಬರಲಿದೆ. ಈ ಹಿನ್ನಲೆಯಲ್ಲಿ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಯನ್ನು ಮಾಡುವಂತೆ ಚಿಕ್ಕೋಡಿ ಜಿಲ್ಲಾ ಹೋರಾಟ ಸಮೀತಿಯಿಂದ ಡಿಸೆಂಬರ್ 23 ರಂದು ಮುಂಜಾನೆ 11 ಗಂಟೆಗೆ ಯಡೂರಿನ ವೀರಭದ್ರೇಶ್ವರ ದೇವಸ್ಥಾನದಲ್ಲಿ ವೀರಭದ್ರೇಶ್ವರ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಪಾದಯಾತ್ರೆಗೆ ಚಾಲನೆಯನ್ನು ನೀಡಲಾಗುವುದು.

ಈ ಪಾದಯಾತ್ರೆಯು 4 ದಿನಗಳ ಕಾಲ ನಡೆಯಲಿದೆ ವಿವಿಧ ಸಂಘಟನೆಗಳ ಸದಸ್ಯರು ಸೇರಿ ಒಟ್ಟು 200 ಯುವಕರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಅದಲ್ಲದೇ ಎಲ್ಲ ರಾಜಕೀಯ ಪಕ್ಷದ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

ಅಂತಿಮವಾಗಿ ಪಾದಯಾತ್ರೆಯು ಬೆಳಗಾವಿ ಸುವರ್ಣಸೌಧಕ್ಕೆ ತೇರಳಿ ಮುಖ್ಯಮಂತ್ರಿಗೆ ಮನವಿಯನ್ನು ಸಲ್ಲಿಸಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನು ಮಾಡುವಂತೆ ‌ಮನವಿಯನ್ನು ಮಾಡಿಕೊಳ್ಳಲಾಗುವುದು ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮೀತಿಯ‌ ಅಧ್ಯಕ್ಷ ‌ಎಸ್.ವೈ.ಹಂಜಿ‌ ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ‌ಭವನದಲ್ಲಿ ಆಯೋಜಿಸಲಾಗಿದೆ

Spread the loveಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ