Breaking News

ಮಹಿಳೆಯರು ಇನ್ನೂ 6 ತಿಂಗಳು ಗರ್ಭ ಧರಿಸ ಬಾರದಂತೆ; ಇದು ಜಿಕಾ ಎಫೆಕ್ಟ್​..!

Spread the love

ರಾಯಚೂರು: ರಾಜ್ಯದ ರಾಯಚೂರು ಜಿಲ್ಲೆಯಲ್ಲಿ ಮೊದಲ ಜಿಕಾ ವೈರಸ್ ಪ್ರಕರಣ ನಿನ್ನೆ ವರದಿಯಾಗಿದ್ದು, ಎಲ್ಲರಲ್ಲೂ ಆಂತಕ ಸೃಷ್ಟಿಸಿದೆ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ನಿಗಾ ವಹಿಸಬೇಕು ಎನ್ನುತ್ತಾರೆ ಮಕ್ಕಳ ತಜ್ಞರು. ಈ ನಡುವೆ ಆರೋಗ್ಯ ಇಲಾಖೆ, ಮುಂದಿನ ಆರು ತಿಂಗಳ ಕಾಲ ಯಾರೂ ಗರ್ಭ ಧರಿಸದಂತೆ, ಸೂಚನೆ ಪ್ರಕಟಿಸಿದೆ.

 

ಜಿಕಾ ವೈರಸ್ ಒಂದೇ ಮಾದರಿಯ ಆರ್‌ಎನ್‌ಎ ವೈರಸ್ ಗುಂಪಿಗೆ (ಫ್ಲೇಮಿ ವೈರಸ್ ಗುಂಪು) ಸೇರಿದ್ದಾಗಿದೆ. ಈಡಿಸ್ ಜಾತಿಯ ಸೊಳ್ಳೆ ಕಚ್ಚುವುದರಿಂದ ಜಿಕಾ ಹರಡುತ್ತದೆ. ಡೆಂಘೆಗೂ ಇದೇ ಸೊಳ್ಳೆ ಕಾರಣ. ಹಳದಿ ಜ್ವರ, ಜಪಾನೀಸ್ ಎನ್ಸೆಲೈಟಿಸ್ ಮತ್ತು ವೆಸ್ಟ್​ ನೈಲ್ ವೈರಸ್​ಗಳೊಂದಿಗೆ ಇದು ನಿಕಟ ಸಂಬಂಧ ಹೊಂದಿದೆ ಎಂದು ಸಂಶೋಧನೆಯಿಂದ ಸಾಬೀತಾಗಿದೆ.

ಇದೀಗ ರಾಯಚೂರು ಜಿಲ್ಲೆಯ ಮಕ್ಕಳ ಆಸ್ಪತ್ರೆಗಳು ತುಂಬಿ ತುಳುಕುತ್ತಿದ್ದು, ಜಿಕಾ ವೈರಸ್ ಕಾರಣ ಆತಂಕಗೊಂಡಿರುವ ಪೋಷಕರು ತಮ್ಮ ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದಾರೆ. ಈಗ ಆರೋಗ್ಯ ಇಲಾಖೆ ಒಟ್ಟು 57 ಗರ್ಭಿಣಿಯರ ರಕ್ತದ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಪರೀಕ್ಷೆ ಕಳುಹಿಸಿದೆ. ಕಳೆದ ವಾರವಷ್ಟೇ ರಾಜ್ಯದಲ್ಲಿ ಮೊದಲ ಬಾರಿಗೆ ಜಿಕಾ ವೈರಸ್ ಪತ್ತೆಯಾಗಿತ್ತು. ಇದು 5 ವರ್ಷದ ಬಾಲಕಿಗೆ ಓರ್ವಳಿಗೆ ಇದ್ದದ್ದು ಟೆಸ್ಟ್‌ನಲ್ಲಿ ದೃಢವಾಗಿತ್ತು. ಇದರ ಬೆನ್ನಲ್ಲೇ ಆರೋಗ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿತ್ತು.

ಇವೆಲ್ಲದರ ನಡುವೆ ಮಾಂಡೌಸ್​ ಚಂಡಮಾರುತದಿಂದಾಗಿ ಚಳಿ ಇನ್ನಷ್ಟು ಹೆಚ್ಚಿದೆ. ಮೊದಲೇ ಚಳಿಗಾಲ. ಅದರ ಜೊತೆ ಮಳೆಯೂ ಸೇರಿದ ಕಾರಣ ಮಕ್ಕಳಲ್ಲಿ ಜ್ವರ, ಕೆಮ್ಮು, ಶೀತ ಕಾಣಿಸಿಕೊಳ್ಳುತ್ತಿದೆ. ಈಗ ರಾಚೂರು ಜಿಲ್ಲೆಯಲ್ಲಿ ಜಿಕಾ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಸಾಮಾನ್ಯ ಜ್ವರ, ಶೀತ, ಕೆಮ್ಮಿನ ತೊಂದರೆಯಿಂದ ಬಳಲುತ್ತಿರುವ ಮಕ್ಕಳನ್ನು ಪೋಷಕರು ಆಸ್ಪತ್ರೆಯತ್ತ ಕರೆದುಕೊಂಡು ಬರುತ್ತಿದ್ದಾರೆ.

ಜಿಕಾ ವೈರಸ್​ ಗರ್ಭ ಧರಿಸಿರುವ ತಾಯಿಯ ಮೂಲಕ ಮಗುವಿಗೆ ತಗುಲುತ್ತದೆ ಎನ್ನುವುದು ಸಂಶೋಧನೆಯಿಂದ ಧೃಢಪಟ್ಟಿದೆ. ಇದರಿಂದ ಮಗು ಹುಟ್ಟುವ ಮುನ್ನವೇ ಗಂಭೀರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ. ಹೀಗಾಗಿ ಈಗ ಆರೋಗ್ಯ ಇಲಾಖೆ, ಮಹಿಳೆಯರಿಗೆ ಮುಂದಿನ ಆರು ತಿಂಗಳ ಕಾಲ ಗರ್ಭ ಧರಿಸದಂತೆ ಸೂಚನೆ ನೀಡಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ