ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 50 ನ್ನು ತಡೆದು ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ 50 ತಡೆದು ಹೋರಾಟ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದಲ್ಲಿ ನಡೆಯಿತು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ವಿಜಯ ಪೂಜಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಎನ್ಎಚ್ 50 ಬಂದ್ ಆಗಿದ್ದ ಕಾರಣ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಎನ್ಎಚ್ 50 ನ್ನು ತಡೆದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಮಾಹಿತಿ ತಿಳಿದ ನಿಡಗುಂದಿ ತಹಶೀಲ್ದಾರ್ ಅನಿಲಕುಮಾರ ಢವಳಗಿಯವರು ಸ್ಥಳಕ್ಕೆ ಆಗಮಿಸಿದರು. ರೈತರು ಮನವಿ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದು ಕೂಡಲೇ ತಮ್ಮ ಬೇಡಿಕೆಗಳನನ್ನು ಈಡೇರಿಸಬೇಕೆಂದು ಒತ್ತಾಯಿಸಿದರು. ಪ್ರತಿಭಟನಾ ಸ್ಥಳದಲ್ಲಿ ನಿಡಗುಂದಿ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದರು.