Breaking News

ರಿಪೋರ್ಟ್‌ ಕಾರ್ಡ್‌’ ಮುಂದಿಟ್ಟು ಮತ ಕೇಳಿ: ಶಾಸಕರಿಗೆ ಜೆ.ಪಿ. ನಡ್ಡಾ ಸಲಹೆ

Spread the love

ಕೊಪ್ಪಳ: ಬಡವರು, ರೈತರು, ದೀನದಲಿತರು ಹೀಗೆ ಎಲ್ಲಾ ವರ್ಗದವರ ಏಳಿಗೆಗೆ ನಮ್ಮ ಸರ್ಕಾರ ಜಾರಿಗೆ ತಂದ ಯೋಜನೆಗಳು ಹಾಗೂ ಮಾಡಿದ ಕೆಲಸಗಳನ್ನು ಜನರ ಮುಂದಿಟ್ಟು ಮತ ಕೇಳಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದರು.

ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಗುರುವಾರ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಸೇರಿದ್ದ ಸಾವಿರಾರು ಜನರನ್ನು ಹುರಿದುಂಬಿಸಿ ಮಾತನಾಡಿದ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಮತ ಕಹಳೆ ಊದಿದರು.

‘ಪ್ರಧಾನಿ ನರೇಂದ್ರ ಮೋದಿ, ಬಿ.ಎಸ್‌. ಯಡಿಯೂರಪ್ಪ ಮಾಡಿದ ಕೆಲಸಗಳು ಮತ್ತು ಈಗ ಬಸವರಾಜ ಬೊಮ್ಮಾಯಿ ಅವರು ಜಾರಿಗೆ ತಂದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ಮುಟ್ಟಿಸಬೇಕು. ಜನರ ಹಿಂದೆ ಹೋಗಬೇಕು’ ಎಂದು ಕರೆ ನೀಡಿದರು.

‘ಆಂಜನೇಯ ಜನಿಸಿದ ಪುಣ್ಯಭೂಮಿಯಿಂದ ಮಾತನಾಡುತ್ತಿರುವುದು ಹೆಮ್ಮೆಯ ಸಂಗತಿ’ ಎಂದು ಮಾತು ಆರಂಭಿಸಿದ ನಡ್ಡಾ ತಮ್ಮ ಮಾತಿನ ಮಧ್ಯೆ ಕಾರ್ಯಕರ್ತರನ್ನು ಹುರಿದುಂಬಿಸಿದರು. ‘ಈ ಬಾರಿ ಬಿಜೆಪಿಯನ್ನು ಗೆಲ್ಲಿಸುತ್ತಿರಲ್ಲವೇ’ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ