Breaking News

ಕುಷ್ಟಗಿ: ಶಾಸಕ ಬಯ್ಯಾಪುರ ಹುಟ್ಟುಹಬ್ಬಕ್ಕೆ ಸಿದ್ದು, ಡಿಕೆಶಿ ಒಂದೇ ಹೆಲಿಕಾಪ್ಟರ್ ನಲ್ಲಿ ಆಗಮನ

Spread the love

ಕುಷ್ಟಗಿ: ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಅವರ 69ನೇ ಹುಟ್ಟುಹಬ್ಬದ ಪ್ರಯುಕ್ತ ಶುಕ್ರವಾರ ಕಾಂಗ್ರೆಸ್ ಬಲ ಪ್ರದರ್ಶನಕ್ಕೆ ಸಜ್ಜಾಗಿದೆ.

ಮುಂದಿನ ಚುನಾವಣೆ ಗಮನದಲ್ಲಿಟ್ಟುಕೊಂಡು ಶಾಸಕ ಬಯ್ಯಾಪುರ ಅವರ ಹುಟ್ಟುಹಬ್ಬದ ಆಚರಣೆ ಹಾಗೂ ಕೈ ಕಾರ್ಯಕರ್ತರ ಸಮಾವೇಶ ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮದ ಮುಖ್ಯ ಆಕರ್ಷಣೆಯ ಕೇಂದ್ರ ಬಿಂದು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ ಆಗಿದ್ದಾರೆ. ಇವರಿಬ್ಬರೂ ಬೆಂಗಳೂರಿನ ಜಕ್ಕೂರುನಿಂದ ಹೆಲಿಕಾಪ್ಟರ್ ಮೂಲಕ ಕುಷ್ಟಗಿ ಸಮೀಪದ ಬೀರಲದಿನ್ನಿ ತಾತ್ಕಾಲಿಕ ಹೆಲಿಪ್ಯಾಡ್ ಗೆ ಬಂದಿಳಿಯಲಿದ್ದಾರೆ. ಅಲ್ಲಿಂದ ಕುಷ್ಟಗಿ ಮುಖ್ಯರಸ್ತೆಯಲ್ಲಿ ಸಿಂಧನೂರು ರಸ್ತೆಯ ಟಿಎಪಿಸಿಎಂಎಸ್ ಮೈದಾನದ ಬೃಹತ್ ವೇದಿಕೆಗೆ ಆಗಮಿಸಿ ಶಾಸಕ ಬಯ್ಯಾಪುರ ಅವರ 69ನೇ ಹುಟ್ಟುಹಬ್ಬ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪ್ರಧಾನ ಭಾಷಣ ಮಾಡುವರು.

ಮತ್ತೊಮ್ಮೆ ಬಯ್ಯಾಪುರ:

ಮಹತ್ವದ ಈ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈಗಾಗಲೇ ಮುಖ್ಯ ವೇದಿಕೆ ಸಿದ್ದವಾಗಿದ್ದು, ಈ ಸಮಾರಂಭ ಅವಿಸ್ಮರಣೆಗೊಳಿಸಲು 30 ಸಾವಿರ ಜನ ಸೇರುವ ನಿರೀಕ್ಷಿಸಿಸಲಾಗಿದೆ. ಈ ಮೂಲಕ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಅವರು, ಪುನಾರಾಯ್ಕೆಯ ಚುನಾವಣಾ ತಂತ್ರವಾಗಿರುವುದು ಗುಟ್ಟಾಗಿ ಉಳಿದಿಲ್ಲ.


Spread the love

About Laxminews 24x7

Check Also

ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!!

Spread the love ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!! ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿನ ಅನಮೋಡ್ ಘಾಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ