Breaking News

ಖಾತೆಗೆ 5 ಸಾವಿರ ರೂ. ವರ್ಗಾವಣೆಗೆ ಇಂದು ಸಿಎಂ ಚಾಲನೆ; ನೇಕಾರ ಸಮ್ಮಾನ್ ಯೋಜನೆಯಡಿ ನೆರವು

Spread the love

ಬೆಂಗಳೂರು: ಕೈಮಗ್ಗ ನೇಕಾರರಿಗೆ ತಲಾ 5000 ರೂ. ಖಾತೆಗೆ ಜಮಾ ಮಾಡಲಾಗುವುದು. ನೇಕಾರ ಸಮ್ಮಾನ್ ಯೋಜನೆಯಡಿ ಈ ವರ್ಷದ ಹಣ ವರ್ಗಾವಣೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ನೇರ ನಗದು ವರ್ಗಾವಣೆಯ ಮೂಲಕ ಕೈಮಗ್ಗ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು ತಲಾ 5000 ರೂ.

ನಂತೆ 23.43 ಕೋಟಿ ರೂ. ಮೊತ್ತವನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಿದ್ದಾರೆ.

ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ ನೆರವಾಗಲು ನೇಕಾರ ಸಮ್ಮಾನ್ ಯೋಜನೆಯನ್ನು ಮುಖ್ಯಮಂತ್ರಿಗಳು 2020 -21ನೇ ಸಾಲಿನಿಂದ ಅನ್ವಯವಾಗುವಂತೆ ಘೋಷಣೆ ಮಾಡಿದ್ದು, ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ ಇದು ನೆರವಾಗಲಿದೆ ಎಂದು ಕೈಮಗ್ಗ ಮತ್ತು ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದ್ದಾರೆ


Spread the love

About Laxminews 24x7

Check Also

ಕೋಲಾರದಲ್ಲಿ 20 ಸಾವಿರ ಹೆಲ್ಮೆಟ್ ಉಚಿತ ವಿತರಣೆ; ಮುಗಿಬಿದ್ದ ಬೈಕ್ ಸವಾರರು

Spread the loveಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದ ಮೈದಾನ ಜಾತ್ರೆಯಂತಾಗಿತ್ತು. ಡಿಸೆಂಬರ್​ 1 ರಿಂದ ಜಿಲ್ಲೆಯಲ್ಲಿ ಬೈಕ್​ ಸವಾರರಿಗೆ ಹೆಲ್ಮೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ