ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರುತ್ತಿಲ್ಲ ಇದರಿಂದಾಗಿ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕೊಟ್ಟಲಗಿ ಗ್ರಾಮವು ಅಥಣಿ ತಾಲೂಕಿನ ಕೊನೆಯ ಹಳ್ಳಿಯಾಗಿದ್ದು ಬಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಾಚರಣೆ ಮಾಡುವ ಅಗತ್ಯ ಇದೆ.
ಎರಡು ಮೂರು ಬಸ್ಸುಗಳು ಏಕಕಾಲಕ್ಕೆ ಬಂದರೆ ಮಾತ್ರ ಪ್ರಯಾಣಿಕರಿಗೆ ಅನುಕೂಲವಾಗುತ್ತಿದೆ. ಬಸ್ಸುಗಳು ಹೆಚ್ಚಿನ ಪ್ರಯಾಣಿಕರನ್ನು ತುಂಬಿಕೊಳ್ಳುತ್ತಿದ್ದು ವಿದ್ಯಾರ್ಥಿಗಳು ಪುಟ್ ಬೋರ್ಡನಲ್ಲಿ ನಿಂತು ಪ್ರಯಾಣ ಮಾಡುವ ಪರಿಸ್ಥಿತಿ ಇದೆ ಇದರಿಂದ ಏನಾದರೂ ಅಪಘಾತವಾದರೆ ಅಧಿಕಾರಿಗಳು ಹೊಣೆಯಾಗಬೇಕಾಗುತ್ತದೆ.ಸುರಕ್ಷಿತ ಪ್ರಯಾಣಕ್ಕೆ ಅನುಕೂಲ ಆಗುವ ನಿಟ್ಟಿನಲ್ಲಿ ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಬೇಕೆಂದು ಪ್ರತಿಭಟನಾ ನಿರತ ಜನರು ಈ ವೇಳೆ ಆಗ್ರಹಿಸಿದರು.ಸುಮಾರು ಅರ್ಧ ಗಂಟೆಗೂ ಹೆಚ್ಚುಕಾಲ ನಡೆದ ಪ್ರತಿಭಟನೆಯಲ್ಲಿ ಅಥಣಿ ಡಿಪೋ ಅಧಿಕಾರಿಗಳ ವಿರುದ್ದ ವಿದ್ಯಾರ್ಥಿಗಳು ಮತ್ತು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು ಕಂಡು ಬಂತು.