ನೇಕಾರರ ಮಕ್ಕಳ ವಿದ್ಯಾನಿಧಿ ಯೋಜನೆಗೆ 46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಗುರುತಿಸಲಾಗಿದ್ದು, ಶೀಘ್ರವಾಗಿ ವಿದ್ಯಾನಿಧಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಡಿಬಿಟಿ ಮೂಲಕ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದರು. 46 ಸಾವಿರ ನೇಕಾರ ಕುಟುಂಬದ ವಿದ್ಯಾರ್ಥಿಗಳ ದಾಖಲೆಗಳನ್ನು ಹದಿನೈದು ದಿನದೊಳಗೆ ಪಡೆದು ಪಟ್ಟಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿಗಳು, ವಿದ್ಯಾರ್ಥಿಗಳಿಗೆ ಕೂಡಲೇ ವಿದ್ಯಾನಿಧಿಯನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದರು.
ಮಕ್ಕಳಿಂದ ಯಾವುದೇ ರೀತಿಯ ಅರ್ಜಿಯನ್ನು ಪಡೆಯುವುದಲ್ಲ. ವಿದ್ಯಾನಿಧಿ ಮಕ್ಕಳ ಹಕ್ಕು ಎಂದು ತಿಳಿಸಿದರು.