ಬೆಂಗಳೂರು: ಕಷ್ಟದಲ್ಲಿ ನೀನು ನನ್ನ ಜೊತೆ ನಿಂತಂತೆ ನಾನು ಎಂದಿಗೂ ನಿನ್ನ ಜೊತೆಯಲ್ಲೇ ನಿಲ್ಲುವೆ ಎಂದು ಹೇಳುವ ಮೂಲಕ ನಟಿ ಮೇಘನಾ ರಾಜ್ ಅವರು ಮೈದುನ ಧ್ರುವ ಸರ್ಜಾ ಅವರಿಗೆ ಹುಟ್ಟುಹಬ್ಬದ ವಿಶ್ ತಿಳಿಸಿದ್ದಾರೆ.
ಇಂದು ಸ್ಯಾಂಡಲ್‍ವುಡ್‍ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಹುಟ್ಟುಹಬ್ಬ. ಇಂದು ಧ್ರುವ ಅಣ್ಣ ಇಲ್ಲದ 32ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಧ್ರುವ ಹುಟ್ಟುಹಬ್ಬಕ್ಕೆ ವಿಶ್ ಮಾಡಿರುವ ಅತ್ತಿಗೆ ಮೇಘನಾ ಅವರು, ನಿನ್ನ ಅಣ್ಣ ಚಿರುವಿನ ಹಾಗೇ ಸದಾ ನಗುತ್ತಿರು ಎಂದು ಆಶೀರ್ವಾದ ಮಾಡಿದ್ದಾರೆ.
ಧ್ರುವ ಹುಟ್ಟುಹಬ್ಬದ ವಿಚಾರವಾಗಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಹಂಚಿಕೊಂಡಿರುವ ಮೇಘನಾ, ನನ್ನ ಕಷ್ಟದ ಸಮಯದಲ್ಲಿ ನೀನು ಹೇಗೆ ನನ್ನ ಜೊತೆಯಲ್ಲಿ ಗಟ್ಟಿಯಾಗಿ ನಿಂತಿದ್ದೆ ಹಾಗೆಯೇ ನಾನು ಕೂಡ ಶಾಶ್ವತವಾಗಿ ನಿನ್ನ ಪಕ್ಕ ನಿಲ್ಲುತ್ತೇನೆ. ಪ್ರಾಮಿಸ್ ಬರ್ತ್‍ಡೇ ಬಾಯ್. ಸದಾ ನೀನು ಖುಷಿಯಾಗಿರು ಎಂದು ಆಶೀಸುತ್ತೇನೆ. ನಮ್ಮ ಚಿರು ನಕ್ಕಂತೆ ನೀನು ನಗುತ್ತಿರು. ಹ್ಯಾಪಿಸ್ಟ್ ಬರ್ತ್‍ಡೇ ಬಿಲ್ ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.
ಕೇವಲ ಮೂರು ಸಿನಿಮಾ ಮಾಡಿ ಚಂದನವನದಲ್ಲಿ ಬಿಗ್ ಸ್ಟಾರ್ ಆಗಿ ಬೆಳೆದು ನಿಂತ ಧ್ರುವ, ಅಣ್ಣನನ್ನು ಕಳೆದುಕೊಂಡು ದುಃಖದಲ್ಲಿ ಇದ್ದಾರೆ. ಈ ಕಾರಣದಿಂದಲೇ ಈ ವರ್ಷ ಧ್ರುವ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡಿಲ್ಲ. ಜೊತೆಗೆ ಕೊರೊನಾ ಕೂಡ ರಾಜ್ಯದಲ್ಲಿ ಅಬ್ಬರಿಸುತ್ತಿದೆ. ಈ ಕಾಣದಿಂದ ಹೆಚ್ಚು ಜನ ಸೇರುವುದು ಬೇಡ ಎಂಬ ನಿಟ್ಟಿನಲ್ಲಿ ಧ್ರುವ ಸರ್ಜಾ ಅವರು ಈ ಬಾರಿಯ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ