Breaking News

ರಾಮನಗರ ಜೆಡಿಎಸ್ ಅಭ್ಯರ್ಥಿಯಾಗಿ ‘ನಿಖಿಲ್ ಕುಮಾರಸ್ವಾಮಿ’ ಘೋಷಣೆ

Spread the love

ಬೆಂಗಳೂರು: ರಾಮನಗರದಲ್ಲಿ ನಡೆಯುತ್ತಿರುವಂತ ಶ್ರೀನಿವಾಸ ಕಲ್ಯಾಣದ ಬಳಿಕ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಈ ಬೆನ್ನಲ್ಲೇ ರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ.

 

 

ಇಂದು ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಶಾಸಕ ಅನಿತಾ ಕುಮಾರಸ್ವಾಮಿಯವರು ( MLA Anitha Kumaraswamy ), ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ. ನಮ್ಮ ಮಾವನವರಿಗೆ, ನನ್ನ ಪತಿ ಅವರಿಗೆ, ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡುವಂತೆ ಮನವಿ ಮಾಡಿದರು.

 

ಇನ್ನೂ ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅದಕ್ಕೆಲ್ಲಾ ತೆರೆ ಎಳೆಯಬೇಕು ಎಂದು ಇವತ್ತು ನಿರ್ಧಾರ ಮಾಡಿದ್ದೇನೆ. ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯುವುದಾಗಿ ಘೋಷಣೆ ಮಾಡಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ