Breaking News

ಶಾಮನೂರು ಶಿವಶಂಕರಪ್ಪ, ಖಂಡ್ರೆಗೆ ತುರ್ತು ನೋಟಿಸ್

Spread the love

ಬೆಂಗಳೂರು: ‘ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಮತ್ತು ರಾಜ್ಯ ಘಟಕದ ಅಧ್ಯಕ್ಷ ಎನ್‌.ತಿಪ್ಪಣ್ಣ ಮಹಾಸಭಾದ ಸ್ಥಾನಗಳನ್ನು ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದು ಅವರನ್ನು ಪದಚ್ಯುತಗೊಳಿಸಬೇಕು ಮತ್ತು ಮಹಾಸಭಾದಲ್ಲಿ ಲಿಂಗಾಯತ ಪದ ಸೇರ್ಪಡೆಗೆ ತಡೆ ನೀಡಬೇಕು’ ಎಂದು ಕೋರಲಾದ ಸಿವಿಲ್‌ ದಾವೆಗೆ ಸಂಬಂಧಿಸಿ ಮೂರು ಜನರಿಗೆ ತುರ್ತು ನೋಟಿಸ್ ಜಾರಿ ಗೊಳಿಸಲು ಬೆಂಗಳೂರು ಸಿಟಿ ಸಿವಿಲ್‌ ಸೆಷನ್ಸ್‌ ನ್ಯಾಯಾಲಯ ಆದೇಶಿಸಿದೆ.

 

ಈ ಕುರಿತಂತೆ ಎಸ್‌.ಎನ್‌.ಕೆಂಪಣ್ಣ ಸೇರಿದಂತೆ ಐವರು ಸಲ್ಲಿಸಿರುವ ದಾವೆಯನ್ನು 9ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಮುಮ್ತಾಜ್, ಪ್ರತಿವಾದಿಗಳ ಗೈರು ಹಾಜರಿಯಲ್ಲಿ ಆಲಿಸಿದರು. ನೋಟಿಸ್ ಜಾರಿಗೆ ಆದೇಶಿಸಿ 2023ರ ಫೆ.17ಕ್ಕೆ ವಿಚಾರಣೆ ಮುಂದೂಡಿದರು.

ದಾವೆಯಲ್ಲಿ ಏನಿದೆ?: ‘ಮಹಾಸಭಾ 2020ರಲ್ಲಿ ತನ್ನ ಬೈ-ಲಾ ನಿಯಮಗಳ ತಿದ್ದುಪಡಿ ಮೂಲಕ ಲಿಂಗಾಯತ ಪದವನ್ನು ವೀರಶೈವದ ಜೊತೆ ಸೇರಿಸಿದೆ. ಇದು ವೀರಶೈವರು ಮತ್ತು ಲಿಂಗಾಯತರನ್ನು ಪ್ರತ್ಯೇಕ ಎಂದು ಗುರುತಿಸಿದಂತಾಗುತ್ತದೆ. ಅಖಿಲ ಭಾರತ ವೀರಶೈವ ಮಹಾಸಭಾದ ಹೆಸರನ್ನು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಎಂದು ಬಳಸದಂತೆ ತಡೆ ನೀಡಬೇಕು’ ಎಂದು ದಾವೆದಾರರು ಕೋರಿದ್ದಾರೆ.

‘ಶಾಮನೂರು ಶಿವಶಂಕರಪ್ಪ ಹಾಲಿ ಕಾಂಗ್ರೆಸ್‌ ಪಕ್ಷದ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಶಾಸಕರಾಗಿದ್ದು 91 ವರ್ಷವಾಗಿದೆ. ಅವರ ದೈಹಿಕ ಮತ್ತು ಮಾನಸಿಕ ದೃಢತೆ ಮಹಾಸಭಾದ ಅಧ್ಯಕ್ಷ ಸ್ಥಾನ ನಿಭಾಯಿಸುವಷ್ಟು ಸಾಮರ್ಥ್ಯ ಹೊಂದಿಲ್ಲ. ಈಶ್ವರ ಖಂಡ್ರೆ ಕೂಡಾ ಕಾಂಗ್ರೆಸ್ ಶಾಸಕರಾಗಿದ್ದಾರೆ. ಇವರು ಮಹಾಸಭಾವನ್ನು ರಾಜಕೀಯ ವೇದಿಕೆಯಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ದಾವೆದಾರರು ಆಪಾದಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ