ಬೆಳಗಾವಿಯಲ್ಲಿ ಸಂಜೆ ಕಾಂಗ್ರೆಸ್ ಚುನಾವಣಾ ಸಮಿತಿಯ ಮೊದಲನೇ ಸಭೆ ಹಮ್ಮಿಕೊಳ್ಳಲಾಗಿದೆ. ಈ ನೂತನ ಸಮೀತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕುರಿತು ತೀರ್ಮಾನ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಉಸ್ತುವಾರಿ ರಣದೀಪ ಸುರ್ಜೆವಾಲಾ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಅವರ ಮಧ್ಯಸ್ಥಿಕೆಯಲ್ಲಿ ಸಭೆ ನಡೆಯಲಿದೆ ಎಂದರು.
ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಪ್ರಕರಣದ ಆರೋಪಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದು, ಮುಂದಿನ ಐದಾರು ದಿನಗಳ ಬಳಿಕ ಸ್ಪಷ್ಟತೆ ತಿಳಿಯಲಿದೆ. ಅಲ್ಲಿಯವರೆಗೆ ಈ ಬಗ್ಗೆ ಏನೂ ಹೇಳುವುದಿಲ್ಲ ಎಂದು ಮಂಗಳೂರ ಡಿಸಿಪಿ ಹೇಳಿಕೆ ಕೊಟ್ಟಿದ್ದರು ಸಹಿತ ಡಿಜಿಪಿ ಅವರು ಆರೋಪಿಯನ್ನು ತನಿಖೆ ನಡೆಸದೇ ಭಯೋತ್ಪಾದಕ ಎಂದು ಯಾವ ಆಧಾರದ ಮೇಲೆ ಹೇಳಿಕೆ ಕೊಟ್ಟಿದ್ದಾರೆ ಎಂಬುದನ್ನು ಸ್ಪಷ್ಟ ಪಡಿಸಬೇಕು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಭ್ರಷ್ಟಾಚಾರ, ಮತಕಳವು ಪ್ರಕರಣವನ್ನು ವಿಷಯಾಂತರ ಮಾಡಲು ಮಂಗಳೂರು ಕುಕ್ಕರ್ ಪ್ರಕರಣವನ್ನು ಬಳಸಿಕೊಂಡರು ಎಂಬುದು ಸ್ಪಷ್ಟವಾಗಿ ಇದರಿಂದ ಗೋಚರಿಸುತ್ತದೆ ಎಂದು ಅವರು ಆರೋಪಿಸಿದರು.