ಸದಾಶಿವ ವರದಿಯನ್ನು ರಾಜ್ಯ ಸರಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಲು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಸೋಮವಾರದಿಂದ ಬೆಳಗಾವಿಯಲ್ಲಿ ಧರಣಿ ನಡೆಸಲಾಗುವುದು ಎಂದು ಸಮಿತಿಯ ರಾಜ್ಯಾಧ್ಯಕ್ಷ ಕೇಶವಮೂರ್ತಿ ಹೇಳಿದರು.
ಭಾನುವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ನ್ಯಾ.ಸದಾಶಿವ ವರದಿಯನ್ನು ಕೂಡಲೇ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವ ವಿಷಯವ ಸದನದಲ್ಲಿ ತೀರ್ಮಾನ ಮಾಡಿದ ವರದಿಯನ್ನು ಸರಕಾರ ಹೋರಾಟದ ಸಮಿತಿಗೆ ತಿಳಿಸಬೇಕು.
ನ್ಯಾ. ನಾಗಮೋಹನ ದಾಸ ಮತ್ತು ನ್ಯಾ. ಕಾಂತರಾಜ ವರದಿಯನ್ನು ಪ್ರತ್ಯೇಕವಾಗಿ ಬಹಿರಂಗ ಮಾಡಿ ಯಥಾವತ್ತಾಗಿ ಜಾರಿ ಮಾಡಬೇಕೆಂದು ಒತ್ತಾಯಿಸಲಾಗುವುದು ಎಂದರು.