Breaking News

10,228 ಕೊರೊನಾ ಪ್ರಕರಣಗಳು ಪತ್ತೆ,ಸೋಂಕಿತರ ಸಂಖ್ಯೆ 6,57,705ಕ್ಕೆ ಏರಿಕೆಯಾಗಿದೆ.

Spread the love

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರಣಕೇಕೆ ಮುಂದುವರಿದಿದ್ದು, ಇಂದು 10,228 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 6,57,705ಕ್ಕೆ ಏರಿಕೆಯಾಗಿದೆ.

ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, 9,993 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 91 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 9,461 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಂದು ರಾಜ್ಯದಲ್ಲಿ 10,228 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,57,705 ಸೋಂಕಿತರ ಪೈಕಿ 1,15,151 ಸಕ್ರಿಯ ಪ್ರಕರಣಗಳಾಗಿದ್ದು, 5,33,074 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 848 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು 48,035 ಮಂದಿಯ ರ‍್ಯಾಪಿಡ್‌ ಟೆಸ್ಟ್ ನಲ್ಲಿ, 44,456 ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು, ಒಟ್ಟು 92,491 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಈ ವರೆಗೆ ಒಟ್ಟು 20,03,778 ಮಂದಿಗೆ ರ‍್ಯಾಪಿಡ್‌ ಟೆಸ್ಟ್, 34,16,176 ಮಂದಿಗೆ ಆರ್ ಟಿ ಪಿಸಿಆರ್ ಮತ್ತು ಇತರೆ ಪರೀಕ್ಷೆ ಮಾಡಿದ್ದು, ಒಟ್ಟು ಕರ್ನಾಟಕದಲ್ಲಿ 54,19,954 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಇಂದು 5,012 ಮಂದಿಗೆ ಸೋಂಕು ದೃಢವಾಗಿದ್ದು, 34 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,57,241ಕ್ಕೆ ಏರಿಕೆ ಆಗಿದೆ. 3,354 ಜನ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 1,98,369ಕ್ಕೆ ಏರಿಕೆಯಾಗಿದೆ. 55,736 ಸಕ್ರಿಯ ಪ್ರಕರಣಗಳಿವೆ.


Spread the love

About Laxminews 24x7

Check Also

ಇರಾನ್​ನಲ್ಲಿ ಸಿಲುಕಿದ್ದ ಕನ್ನಡಿಗರು ತಾಯ್ನಾಡಿಗೆ: ಒಂದೇ ಗ್ರಾಮದ 16 ಜನ ವಾಪಸ್​

Spread the loveಬೆಂಗಳೂರು, ಜೂನ್​ 21: ಇರಾನ್ ಮತ್ತು ಇಸ್ರೇಲ್ (Iran and Israel) ನಡುವಿನ ಯುದ್ಧ ಮುಂದುವರೆಯುತ್ತಿದ್ದು ದಿನದಿಂದ ದಿನಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ