Breaking News

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಮೇಲೆ ಲೋಕಾಯುಕ್ತ ದಾಳಿ..!

Spread the love

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಬೆಂಗಳೂರಿನ ಕೇಂದ್ರ ಸೇರಿ ಜಿಲ್ಲಾ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಲಕ್ಷಾಂತರ ರೂ.ನಗದನ್ನು ವಶಪಡಿಸಿಕೊಂಡಿದೆ.

ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ರಾಣಿಬೆನ್ನೂರು ಕಚೇರಿಯಲ್ಲಿ ೮.೯೦ ಲಕ್ಷ ರೂ.

ನಷ್ಟು ದಾಖಲೆಗಳಿಲ್ಲದ ಹಣವನ್ನು ಲೋಕಾಯುಕ್ತ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ನಿಗಮದ ವ್ಯವಸ್ಥಾಪಕ ನಿದೇರ್ಶಕರ ನಿವಾಸ ಮತ್ತು ಅವರ ಸಂಬಂಧಿಕರ ಮನೆಗಳ ಮೇಲೆ ಮತ್ತು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಮನೆಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ದಾಳಿ ಮುಂದುವರಿಸಿದ್ದಾರೆ.

ಬೆಂಗಳೂರಿನಲ್ಲಿ ನಾಲ್ಕು ತಂಡಗಳು ದಾಳಿ ನಡೆಸಿದರೆ, ಹಾವೇರಿಯಲ್ಲಿ ಎರಡು ತಂಡ, ಧಾರವಾಡ ಮತ್ತು ಗದಗ, ಬೆಳಗಾವಿಯ ಜಿಲ್ಲಾ ಕಚೇರಿಯಗಳ ಮೇಲೆ ತಲಾ ಒಂದು ತಂಡ ತಡರಾತ್ರಿಯವರೆಗೂ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಗಂಗಾಕಲ್ಯಾಣಯಡಿ ಸಬ್‌ಮರ್ಸಿಬಲ್ ಪಂಪ್ ನೀಡುವುದರಲ್ಲಿ ಅವ್ಯವಹಾರ ಹಾಗೂ ಭೂ ಒಡೆತನ, ಉದ್ಯಮಶೀಲನೆ ಸೇರಿ ಇತರೆ ಯೋಜನೆಗಳಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿರುವ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿತ್ತು.

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಈ ದಾಳಿ ನಡೆಸಿದೆ. ೪೦ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಶನಿವಾರ ಬೆಳಗ್ಗೆ ೧೧ ಗಂಟೆಯ ಸಮಯದಲ್ಲಿ ಏಕಕಾಲದಲ್ಲಿ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿದೆ. ಶನಿವಾರ ತಡರಾತ್ರಿಯವರೆಗೂ ದಾಳಿ ನಡೆಸಲಾಗಿದ್ದು, ಈ ದಾಳಿ ಮುಂದುವರಿಯಲಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಮಲೆನಾಡಲ್ಲಿ ಮಳೆಯ ಅಬ್ಬರ; ಕೈ ಬೀಸಿ ಕರೆಯುತ್ತಿದೆ ಜೋಗ ಜಲಪಾತ

Spread the love ಶಿವಮೊಗ್ಗ, ಜುಲೈ 06: ಶಿವಮೊಗ್ಗ ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆ ಅಬ್ಬರಿಸುತ್ತಿದೆ. ಹಳ್ಳಕೊಳ್ಳಗಳು ಭರ್ತಿಯಾಗಿದ್ದು, ತುಂಗಾ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Sahifa Theme License is not validated, Go to the theme options page to validate the license, You need a single license for each domain name.