Breaking News

ಡಬಲ್ ಖುಷಿ: ಗ್ರಾಮ ಪಂಚಾಯತ್ ಅಧ್ಯಕ್ಷ-ಉಪಾಧ್ಯಕ್ಷ-ಸದಸ್ಯರ ಗೌರವಧನ ಹೆಚ್ಚಳ;

Spread the love

ಬೆಂಗಳೂರು: ಚುನಾವಣೆ ಸಮೀಪಿಸುತ್ತಿದ್ದಂತೆ ಸಾರ್ವಜನಿಕರಿಗೆ ಹಲವಾರು ಯೋಜನೆಗಳನ್ನು ಘೋಷಿಸಿ ಖುಷಿಪಡಿಸುತ್ತಿರುವ ಸರ್ಕಾರ, ಜನಪ್ರತಿನಿಧಿಗಳ ಮೆಚ್ಚುಗೆಯನ್ನೂ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನು ಇರಿಸಿದೆ. ಆ ಸಲುವಾಗಿ ಅದು ಗ್ರಾಮಪಂಚಾಯತ್ ಮಟ್ಟದ ಜನಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಿದೆ.

 

ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಿರುವ ಕುರಿತು ಸರ್ಕಾರ ಆದೇಶವನ್ನು ಹೊರಡಿಸಿದೆ. ಗೌರವಧನ ಮೊತ್ತದಲ್ಲಿ ಪರಿಷ್ಕರಣೆ ಮಾಡಿರುವ ಸರ್ಕಾರ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ 6 ಸಾವಿರ, ಉಪಾಧ್ಯಕ್ಷರಿಗೆ 4 ಸಾವಿರ ಹಾಗೂ ಸದಸ್ಯರಿಗೆ 2 ಸಾವಿರ ರೂ. ಮಾಸಿಕ ಗೌರವಧನವನ್ನು ನಿಗದಿಗೊಳಿಸಲು ತೀರ್ಮಾನಿಸಿದ್ದಾಗಿ ಆದೇಶದಲ್ಲಿ ತಿಳಿಸಿದೆ.

ಈ ಹಿಂದೆ ರಾಜ್ಯದಲ್ಲಿನ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ 3 ಸಾವಿರ, ಉಪಾಧ್ಯಕ್ಷರಿಗೆ 2 ಸಾವಿರ ಹಾಗೂ ಸದಸ್ಯರಿಗೆ 1 ಸಾವಿರ ರೂ. ಮಾಸಿಕ ಗೌರವಧನವನ್ನು ನಿಗದಿಪಡಿಸಿ, ನೀಡಲಾಗುತ್ತಿತ್ತು. ಇದೀಗ ಅದನ್ನು ಪರಿಷ್ಕರಿಸಿ ಎಲ್ಲರ ಮಾಸಿಕ ಗೌರವಧನವನ್ನು ದುಪ್ಪಟ್ಟುಗೊಳಿಸಲಾಗಿದೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ