ಮುಂಬೈ, ಡಿ. 18: ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಜ್ಯೋತಿಬಾ ಫುಲೆ ಅವರ ಬಗ್ಗೆ ಹಗುರವಾಗಿ ಮಾತನಾಡಿ ಅವಮಾನ ಮಾಡಿದ್ದಾರೆ ಎಂದು ಮಹಾರಾಷ್ಟ್ರ ಸಚಿವರ ಮೇಲೆ ಕಳೆದ ವಾರ ಮಸಿ ದಾಳಿ ನಡೆಸಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಶಿಕ್ಷಣ ಸಚಿವ ಚಂದ್ರಕಾಂತ್ ಪಾಟೀಲ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಾಗ ಫೇಸ್ ಶೀಲ್ಡ್ ಧರಿಸಿ ಅಚ್ಚರಿ ಮೂಡಿಸಿದ್ದಾರೆ.
ಮಹಾರಾಷ್ಟ್ರದ ಉನ್ನತ ಶಿಕ್ಷಣ ಸಚಿವ ಚಂದ್ರಕಾಂತ್ ಪಾಟೀಲ್ ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದರು. ಈ ಸಮಯದಲ್ಲಿ, ಅವರು ಫೇಸ್ ಶೀಲ್ಡ್ ಧರಿಸಿ ಮುಚ್ಚೆನ್ನರಿಕೆ ತೆಗೆದುಕೊಂಡಿದ್ದಾರೆ. ಕಳೆದ ವಾರ ಚಿಂಚ್‌ವಾಡ್ ಪ್ರದೇಶದಲ್ಲಿಯೇ ಅವರ ಮೇಲೆ ಮಸಿ ಎರಚಲಾಗಿತ್ತು.
ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ಮಹಿಳಾ ಸ್ವಸಹಾಯ ಗುಂಪುಗಳ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದ್ದರು. ಇಲ್ಲಿಯೂ ಮಸಿ ಎರಚಲಾಗುತ್ತದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬೆದರಿಕೆ ಬಂದ ಕಾರಣ ಪೊಲೀಸರು ಎಚ್ಚರಿಕೆ ನೀಡಿದ್ದರು. ಹೀಗಾಗಿ ಸಚಿವ ಚಂದ್ರಕಾಂತ್ ಪಾಟೀಲ್ ಫೇಸ್ ಶೀಲ್ಡ್ ಧರಿಸಿ ಮುನ್ನೆಚ್ಚರಿಕೆ ತೆಗೆದುಕೊಂಡಿದ್ದಾರೆ.
ಸಚಿವರು, ಸಮಾಜ ಸುಧಾರಕರಾದ ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಜ್ಯೋತಿಬಾ ಫುಲೆ ಅವರು ಶಿಕ್ಷಣ ಸಂಸ್ಥೆಗಳನ್ನು ನಡೆಸಲು ಸರ್ಕಾರದ ಅನುದಾನವನ್ನು ಅವಲಂಬಿಸಿರದೆ ಹಣಕ್ಕಾಗಿ ಜನರ ಬಳಿ “ಭಿಕ್ಷೆ” ಬೇಡಿದ್ದರು ಎಂಬ ಹೇಳಿಕೆ ನೀಡಿದ್ದರು. ಭಿಕ್ಷೆ ಎಂಬ ಪದ ಬಳಸಿದ್ದಕ್ಕೆ ಅವರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿತ್ತು.