Breaking News

ಪಂ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

Spread the love

ರಾಜ್ಯ ಗ್ರಾಪಂ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಶ್ರೇಯೋಭಿವೃದ್ಧಿ ಸಂಘ ಸೋಮವಾರ ಸುವರ್ಣ ವಿಧಾನಸೌಧದ ಎದುರಿನ ಕೊಂಡುಸಕೊಪ್ಪ ಗ್ರಾಮದಲ್ಲಿ ಪ್ರತಿಭಟನೆ ನಡೆಸಿ‌ ಸರಕಾರಕ್ಕೆ ಒತ್ತಾಯಿಸಿದರು.

ಗ್ರಾಪಂ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕ್ಲಕ್೯, ಬಿಲ್ ಕಲೆಕ್ಟರ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಗಳನ್ನು ಸಿ ದರ್ಜೆಯ ಮೇಲ್ದರ್ಜೆಗೆ ಏರಿಸಬೇಕು‌ ಮತ್ತು ಅಟೆಂಡರ್, ಕ್ಲೀನರ್ಸ್, ವಾಟರ್ ಮ್ಯಾನ್ ಮೊದಲಾದ ಹುದ್ದೆಯನ್ನು ಡಿ ದರ್ಜೆಯ ಮೇಲ್ದರ್ಜೆಗೇರಿಸುವ ಮೂಲಕ ನಗರ ಮತ್ತು ಪಪಂನಲ್ಲಿರುವಂತೆ ಪಂಚಾಯತ್ ನೌಕರರಿಗೂ ಕನಿಷ್ಠ ವೇತನದ ಬದಲು ವೇತನ ಶ್ರೇಣಿ ನಿಗದಿ ಪಡಿಸಬೇಕು. ಜತೆಗೆ ನೌಕರರು ಮತ್ತು ನೌಕರರ ಅವಲಂಬಿತರಿಗೆ ಸರಕಾರದಿಂದಲೇ ಸೂಕ್ತ ಆರೋಗ್ಯ ಭದ್ರತೆಯೊಂದಿಗೆ ಪಂಚಾಯತ್ ನೌಕರರ ನಿವೃತ್ತಿ ಜೀವನಕ್ಕೆ ಆರ್ಥಿಕ ಭದ್ರತೆ ಕಲ್ಪಿಸಬೇಕೆಂದು ಆಗ್ರಹಿಸಿದರು.

ಗ್ರಾಪಂ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವಾಟರ್ ಮ್ಯಾನ್, ಶುಚಿತ್ವ ನೌಕರ, ಅಟೆಂಡರ್, ಬಿಲ್ ಕಲೇಕ್ಟರ್ ಮತ್ತು ಡಾಟಾ ಎಂಟ್ರಿ ನೌಕರರಿಗೆ ಅವರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಪರಿಗಣಿಸದೇ ಹಾಗೂ ಪಂಚಾಯತಿಗಳಲ್ಲಿ ಹುದ್ದೆಗಳ ಗರಿಷ್ಠ ಮಿತಿ ಹಾಗೂ ಕಾಲ ಮಿತಿಯನ್ನು ನಿಗದಿ ಪಡಿಸಿದೆ‌. ರಾಜ್ಯದಲ್ಲಿರುವ ಎಲ್ಲಾ ನೌಕರರಿಗೂ ಒಂದು ಬಾರಿ ಜಿಪಂ‌ ನಿಂದ ಕಡ್ಡಾಯವಾಗಿ ಅನುಮೋದನೆ ನೀಡಬೇಕು. ಗ್ರಾಪಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳದೆ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ರಾಜ್ಯದ ಎಲ್ಲಾ ಡಾಟಾ ಎಂಟ್ರಿ ಆಪರೇಟರ್ ಗಳಿಗೆ ಕಡ್ಡಾಯವಾಗಿ ಜಿಪಂ ಅನುಮೋದನೆ ನೀಡಬೇಕೆಂದು ಒತ್ತಾಯಿಸಿದರು.


Spread the love

About Laxminews 24x7

Check Also

ರಾಜ್ಯ ಸರ್ಕಾರದಿಂದ ಕೋಮುಗಲಭೆ, ಕ್ರೈಂ ತಡೆಗೆ ಮಹತ್ವದ ಕ್ರಮ: ಈ ತಂತ್ರಾಂಶ, ಕೈಪಿಡಿಗಳನ್ನು ಸಿಎಂ ಬಿಡುಗಡೆ

Spread the love ಬೆಂಗಳೂರು: ರಾಜ್ಯ ಸರ್ಕಾರದಿಂದ ಕೋಮುಗಲಭೆ, ಕ್ರೈಂ ತಡೆಗೆ ಮಹತ್ವದ ಕ್ರಮ ವಹಿಸಲಾಗಿದೆ. ಅದರ ಭಾಗವಾಗಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Sahifa Theme License is not validated, Go to the theme options page to validate the license, You need a single license for each domain name.