ಬೆಳಗಾವಿ: ಮಹಾರಾಷ್ಟ್ರದಿಂದ ನಗರಕ್ಕೆ ಬರುತ್ತಿದ್ದ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಬಳಿ ಜಿಲ್ಲಾ ಪೊಲೀಸರು ಸೋಮವಾರ ತಡೆದಿದ್ದಾರೆ.
ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಬೆಳಗಾವಿಯಲ್ಲಿ ಎಂಇಎಸ್ ಆಯೋಜಿಸಲು ಮುಂದಾಗಿದ್ದ ಮಹಾಮೇಳಾವದಲ್ಲಿ ಭಾಗವಹಿಸಲು ಕಾರ್ಯಕರ್ತರು ಬರುತ್ತಿದ್ದರು.
ಆದರೆ, ಜಿಲ್ಲಾಡಳಿತ ಮಹಾಮೇಳಾವ್ ನಡೆಸಲು ಅನುಮತಿ ನಿರಾಕರಿಸಿದೆ. ಪೊಲೀಸರ ಎಚ್ಚರಿಕೆ ಹಿನ್ನೆಲೆಯಲ್ಲಿ ಎಂಇಎಸ್ ಕಾರ್ಯಕರ್ತರು ತಾವೇ ವೇದಿಕೆ ತೆರವುಗೊಳಿಸಿದ್ದಾರೆ.
ಜಿಲ್ಲೆಯ ಗಡಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ
Laxmi News 24×7