Breaking News

ಬೆಳಗಾವಿ ಪ್ರವೇಶಕ್ಕೆ ಯತ್ನಿಸಿದ ಮಹಾರಾಷ್ಟ್ರದ ಕಾರ್ಯಕರ್ತರಿಗೆ ತಡೆ

Spread the love

ಬೆಳಗಾವಿ: ಮಹಾರಾಷ್ಟ್ರದಿಂದ ನಗರಕ್ಕೆ ಬರುತ್ತಿದ್ದ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ನಿಪ್ಪಾಣಿ ತಾಲ್ಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಬಳಿ ಜಿಲ್ಲಾ ಪೊಲೀಸರು ಸೋಮವಾರ ತಡೆದಿದ್ದಾರೆ.

ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಬೆಳಗಾವಿಯಲ್ಲಿ ಎಂಇಎಸ್ ಆಯೋಜಿಸಲು ಮುಂದಾಗಿದ್ದ ಮಹಾಮೇಳಾವದಲ್ಲಿ ಭಾಗವಹಿಸಲು ಕಾರ್ಯಕರ್ತರು ಬರುತ್ತಿದ್ದರು.

ಆದರೆ, ಜಿಲ್ಲಾಡಳಿತ ಮಹಾಮೇಳಾವ್ ನಡೆಸಲು ಅನುಮತಿ ನಿರಾಕರಿಸಿದೆ. ಪೊಲೀಸರ ಎಚ್ಚರಿಕೆ ಹಿನ್ನೆಲೆಯಲ್ಲಿ ಎಂಇಎಸ್ ಕಾರ್ಯಕರ್ತರು ತಾವೇ ವೇದಿಕೆ ತೆರವುಗೊಳಿಸಿದ್ದಾರೆ‌.

ಜಿಲ್ಲೆಯ ಗಡಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ