ಸುವರ್ಣ ವಿಧಾನಸೌಧ: ರಾಜ್ಯ ಮುಜರಾಯಿ ದೇವಸ್ಥಾನಗಳ ಪ್ರವೇಶ ದ್ವಾರದಲ್ಲಿ ದೇವಸ್ಥಾನದ ಒಳಗೆ ಎಲ್ಲ ಜಾತಿಯವರಿಗೂ ಮುಕ್ತ ಅವಕಾಶ ಇರುತ್ತದೆ ಎಂಬ ಬೋರ್ಡ್ ಅಳವಡಿಸುವ ಮೂಲಕ ಎಲ್ಲರಿಗೂ ದೇವಸ್ಥಾನದ ಒಳಗೆ ಪ್ರವೇಶಿಸಲು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ವಿಧಾನ ಮಂಡಲ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ 6ನೇ ವರದಿಯಲ್ಲಿ ಸರ್ಕಾರಕ್ಕೆ ಈ ಶಿಫಾರಸು ಮಾಡಿದೆ.
ಮಂಗಳವಾರ ವಿಧಾನಸಭೆಯಲ್ಲಿ ಸಮಿತಿಯ ಅಧ್ಯಕ್ಷ ಎಂ.ಪಿ.ಕುಮಾರಸ್ವಾಮಿ ವರದಿಯನ್ನು ಮಂಡಿಸಿದರು.
ರಾಜ್ಯದಲ್ಲಿ ಪರಿಶಿಷ್ಟ ಹಾಗೂ ಇತರೆ ಜನಾಂಗದವರು ಶಾಂತಿ ಸೌಹಾರ್ದತೆಯಿಂದ ಇರಲು ಆಯಾ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಿದಾಗ ದಲಿತರ ಮನೆಗೆ ಹೋಗಿ ಅರಿವು ಮೂಡಿಸುವ ಕೆಲಸ ಆಗಬೇಕು. ಈ ಮೂಲಕ ಜಿಲ್ಲಾಡಳಿತ ಪರಿಶಿಷ್ಟರ ಸಹಕಾರಕ್ಕೆ ಬರಲಿದೆ ಎಂಬ ಜಾಗೃತಿ ಮೂಡಿಸುವ ಅಗತ್ಯವಿದೆ. ಅತಿ ಸೂಕ್ಷ್ಮ ಪ್ರದೇಶಗಳಾದ ಗ್ರಾಮಗಳಿಗೆ ಪೊಲೀಸರು ಆಗಾಗೆ ಭೇಟಿ ನೀಡಬೇಕು. ಗ್ರಾಮದ ಜನರಲ್ಲಿ ವಿಶ್ವಾಸ ಮೂಡಿಸುವ ಜತೆಗೆ ಪರಿಶಿಷ್ಟರು ಹಾಗೂ ಸಾಮಾನ್ಯರ ನಡುವೆ ಸೌಹಾರ್ದ ಜೀವನ ಸಾಗಬೇಕು. ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿಸುವ ನಿಟ್ಟಿನಲ್ಲಿ ಪೊಲೀಸ್ ಠಾಣೆಗಳಿಂದ ಅತ್ಯಂತ ಸೂಕ್ಷ್ಮ ಪ್ರದೇಶದ ಗ್ರಾಮಗಳಿಗೆ ಆಗಾಗೆ ಗಸ್ತು ನಡೆಸುತ್ತಿರಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.
 Laxmi News 24×7
Laxmi News 24×7
				 
		 
						
					 
						
					 
						
					