Breaking News

8ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿ; ಮೂವರಿಂದ ಅತ್ಯಾಚಾರ ಶಂಕೆ

Spread the love

ಎಂಟನೇ ತರಗತಿ ವಿದ್ಯಾರ್ಥಿನಿ (8th Class Student) ಗರ್ಭಿಣಿಯಾಗಿರುವ (Pregnant) ಆಘಾತಕಾರಿ ಘಟನೆ ಕೊಪ್ಪಳ ತಾಲೂಕಿನಲ್ಲಿ (Koppal Taluk) ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಮೇಲೆ ಮೂವರಿಂದ ಅತ್ಯಾಚಾರ ನಡೆದಿರುವ ಅನುಮಾನಗಳು ವ್ಯಕ್ತವಾಗಿವೆ. ಕೊಪ್ಪಳ ತಾಲೂಕಿನ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ ಭಯದಿಂದ ತನ್ನ ಮೇಲಾದ ಅತ್ಯಾಚಾರವನ್ನು ಯಾರ ಬಳಿಯೂ ಹೇಳಿಕೊಂಡಿರಲಿಲ್ಲ.
ಇದೀಗ ಆರು ತಿಂಗಳ ನಂತರ ಆಕೆ ಗರ್ಭಿಣಿಯಾಗಿದ್ದರಿಂದ ಈ ವಿಷಯ ಪೋಷಕರಿಗೆ (Parents) ಗೊತ್ತಾಗಿದೆ. ಈ ಸಂಬಂಧ ವಿದ್ಯಾರ್ಥಿನಿ ಪೋಷಕರು ಕೊಪ್ಪಳ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೋಕ್ಸೋ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ (Judicial Custody) ನೀಡಿದೆ.

ಬಾಲಕಿ ಅತ್ಯಾಚಾರದ ಬಳಿಕ ಮಾನಸಿಕ ಖಿನ್ನತೆಗೆ (Mental Illness) ಒಳಗಾಗಿದ್ದಾಳೆ ಎಂದು ತಿಳಿದು ಬಂದಿದೆ. ಆಕೆಯ ದೈಹಿಕ ಬದಲಾವಣೆ ಕಂಡು ಪೋಷಕರು ವಿಚಾರಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಬಂಧಿತ ಆರೋಪಿ ಬಾಲಕಿ ವಾಸವಾಗಿರುವ ಗ್ರಾಮದ ನಿವಾಸಿಯಾಗಿದ್ದಾನೆ.

ಪೋಕ್ಸೋ ಕೇಸ್​, ಪ್ರಿನ್ಸಿಪಾಲ್ ಅರೆಸ್ಟ್

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲು ಆಗಿದೆ. ಪ್ರಿನ್ಸಿಪಾಲ್ ವಿರುದ್ಧ ಪೊಕ್ಸೊ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಯಾದಗಿರಿ ಮಹಿಳಾ ಪೋಲಿಸ್ ಠಾಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರಿನನ್ವಯ ಕೇಸ್ ದಾಖಲಾಗಿತ್ತು.

ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ವಿದ್ಯಾರ್ಥಿನಿಯರು ತಮಗಾದ ನೋವನ್ನು ಆಪ್ತ ಸಮಾಲೋಚಕರ ಬಳಿ ತೊಡಿಕೊಂಡಿದ್ದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ