Breaking News

ಬೊಮ್ಮಾಯಿ ಸೋಮವಾರ ದಿಢೀರ್‌ ದಿಲ್ಲಿಗೆ, ವಿಸ್ತರಣೆಯೋ, ಸೇರ್ಪಡೆಯೋ?

Spread the love

ಬೆಂಗಳೂರು: ವರಿಷ್ಠರ ಬುಲಾವ್‌ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನದ ನಡುವೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ದಿಢೀರ್‌ ದಿಲ್ಲಿಗೆ ತೆರಳುತ್ತಿದ್ದು, ಸಂಪುಟ ವಿಸ್ತರಣೆ ಸುದ್ದಿಗೆ ರೆಕ್ಕೆಪುಕ್ಕ ಸಿಕ್ಕಂತಾಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ 6 ಮಂದಿ ಸಂಕ್ರ ಮಣದ ವೇಳೆಗೆ ಸಚಿವರಾಗಲಿದ್ದಾರೆ ಎನ್ನಲಾಗಿದೆ.

ಅಧಿವೇಶನ ಮುಗಿದ ಬಳಿಕ ಜ. 2 ಅಥವಾ 3ರಂದು ಮುಖ್ಯಮಂತ್ರಿ ದಿಲ್ಲಿಗೆ ಹೋಗುವ ನಿರೀಕ್ಷೆಯಿತ್ತು. ಈಗ ದಿಢೀರ್‌ ಬುಲಾವ್‌ ಬಂದಿರುವ ಹಿನ್ನೆಲೆಯಲ್ಲಿ ತುರ್ತಾಗಿ ದಿಲ್ಲಿಗೆ ತೆರಳುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಚುನಾವಣೆ ಕುರಿತೂ ಚರ್ಚೆ
ಸಂಪುಟ ವಿಸ್ತರಣೆ ಹಾಗೂ ವಿಧಾನಸಭಾ ಚುನಾವಣೆಗೆ ರಾಜ್ಯಕ್ಕೆ ಕೇಂದ್ರ ಪ್ರಭಾರಿಗಳು ಹಾಗೂ ರಾಜ್ಯದ ಚುನಾವಣ ಉಸ್ತುವಾರಿ ನೇಮಕ ಕುರಿತೂ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ವಿಸ್ತರಣೆಯೋ, ಸೇರ್ಪಡೆಯೋ?
ಸಂಪುಟ ವಿಸ್ತರಣೆ ಮಾಡಬೇಕಾ ಅಥವಾ ಹಿರಿಯ ಸಚಿವರನ್ನು ಕೈಬಿಟ್ಟು ಹೊಸಬರನ್ನು ಸೇರಿಸಿ ಕೊಳ್ಳಬೇಕಾ? ಮುಂದಿನ ಚುನಾವಣೆ ದೃಷ್ಟಿಯಿಂದ ಯಾವುದು ಉತ್ತಮ ಮುಂತಾದ ಲೆಕ್ಕಾ ಚಾರ ಹಾಕಿ ಕೊಂಡು ಆಕಾಂಕ್ಷಿಗಳ ಪಟ್ಟಿಯೊಂದಿಗೆ ಸಿಎಂ ತೆರಳುತ್ತಿದ್ದಾರೆ. ಅಮಿತ್‌ ಶಾ ಹಾಗೂ ಜೆ.ಪಿ. ನಡ್ಡಾ ಜತೆಗೆ ಸಮಾ ಲೋಚಿಸಿದ ಬಳಿಕ ಸ್ಪಷ್ಟತೆ ಸಿಗಲಿದೆ. ಏನೇ ಇದ್ದರೂ ಅಂತಿಮ ತೀರ್ಮಾನವನ್ನು ವರಿಷ್ಠರು ತೆಗೆದು ಕೊಳ್ಳ ಲಿದ್ದಾರೆ. ಕೆ.ಎಸ್‌. ಈಶ್ವರಪ್ಪ ಹಾಗೂ ರಮೇಶ್‌ ಜಾರಕಿಹೊಳಿ ಜತೆಗೆ ಇನ್ನೂ ನಾಲ್ವರು ಸಂಪುಟ ಸೇರಲಿದ್ದಾರೆ ಎಂದು ಮೂಲಗಳು ಹೇಳಿವೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ