Breaking News

ರಾಹುಲ್‌ ಯಾತ್ರೆ ತಡೆಗೆ ಕೋವಿಡ್ ನೆಪ: ಸತೀಶ್‌ ಜಾರಕಿಹೊಳಿ

Spread the love

ಬೆಳಗಾವಿ: ದೇಶದಲ್ಲಿ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ “ಭಾರತ್‌ ಜೋಡೋ ಯಾತ್ರೆ’ ತಡೆಯಲು ಬಿಜೆಪಿ ಮತ್ತೆ ಕೊರೊನಾ ಬಳಕೆ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಆರೋಪಿಸಿದರು.

 

ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್‌ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತಿವೆ. ಇದರಲ್ಲಿ ಮುಖ್ಯವಾಗಿ “ಭಾರತ ಜೋಡೋ ಯಾತ್ರೆ’ ಅಭೂತಪೂರ್ವವಾಗಿ ಮುನ್ನುಗ್ಗುತ್ತಿದೆ. ಇದನ್ನು ಸಹಿಸಿಕೊಳ್ಳದ ಬಿಜೆಪಿ ಅದನ್ನು ತಡೆಯಲು ಕೊರೊನಾ ನೆಪ ಹೇಳುತ್ತಿದೆ ಎಂದರು.

ದೇಶದಲ್ಲಿ 2019ರಿಂದ ಕೊರೊನಾ ಇತ್ತು. ಮೊದಲ ಹಾಗೂ ಎರಡನೇ ವರ್ಷದಲ್ಲಿ ಬಹಳ ವೇಗವಾಗಿ ಹರಡಿತ್ತು. ಆದರೆ ಈಗ ಕೊರೊನಾ ಅಂತಹ ಅಪಾಯಕಾರಿಯಾಗಿ ಕಾಣಿಸುತ್ತಿಲ್ಲ. ಈಗ ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರ ನಡೆಗೆ ದೇಶದ ಜನ ಹೆದರಿ ಮತ್ತೆ ಮಾಸ್ಕ್ ಹಾಕಿಕೊಳ್ಳಲು ಯೋಚಿಸುತ್ತಿದ್ದಾರೆ ಎಂದು ಟೀಕಿಸಿದರು.

ಕರ್ನಾಟಕದಲ್ಲಿ ಈಗ ಚುನಾವಣೆ ಬರುತ್ತಿದೆ. ಕಾಂಗ್ರೆಸ್‌ ಕಾರ್ಯಕ್ರಮಗಳಿಗೆ ಜನ ಹೆಚ್ಚು ಗಮನಹರಿಸುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ. ಇದನ್ನು ಅರಗಿಸಿಕೊಳ್ಳಲು ಬಿಜೆಪಿಗೆ ಆಗುತ್ತಿಲ್ಲ. ಹೀಗಾಗಿ ಕೊರೊನಾ ತಂತ್ರ ಹೂಡಲು ಮುಂದಾಗಿದೆ ಎಂದು ಆರೋಪಿಸಿದರು.


Spread the love

About Laxminews 24x7

Check Also

ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ

Spread the love ಹುಕ್ಕೇರಿ : ಹುಕ್ಕೇರಿ ನಗರ ಅಭಿವೃದ್ಧಿಗೆ ಶ್ರಮಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ ಹುಕ್ಕೇರಿ ನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ