Breaking News

ಸರಕಾರವು ರೈತರ ಸಾಲ‌ ಮನ್ನಾ ಮಾಡಿದ್ದು ಇದುವರೆಗೂ ಬಾಕಿ ಇರುವ ಹಣ ಕೂಡಲೇ ಬಿಡುಗಡೆ ಮಾಡಬೇಕು.

Spread the love

ಸಂಘಗಳ ಸಾಲದ ವ್ಯವಹಾರದಲ್ಲಿ ಮಾರ್ಜಿನ್ ಹಣ ಈ‌ ಹಿಂದೆ ಇದ್ದ ಶೇ.3ರಷ್ಟರಂತೆ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಬ್ಯಾಂಕ್ ಗಳ ಕ್ಷೇಮಾಭಿವೃದ್ಧಿ ಮಹಾಮಂಡಳ ಸೋಮವಾರ ಸುವರ್ಣ ವಿಧಾನಸೌಧದ ಮುಂಭಾಗದಲ್ಲಿರುವ ಬಸ್ತವಾಡದ ಬಳಿ ಪ್ರತಿಭಟನೆ ನಡೆಸಿದರು.

ಸರಕಾರವು ರೈತರ ಸಾಲ‌ ಮನ್ನಾ ಮಾಡಿದ್ದು ಇದುವರೆಗೂ ಬಾಕಿ ಇರುವ ಹಣ ಕೂಡಲೇ ಬಿಡುಗಡೆ ಮಾಡಬೇಕು. ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯಲ್ಲಿ ಸಂಘಗಳಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಖೋತಾ ಮಾಡಬೇಕು. ರಾಜ್ಯದ ಪ್ರಾಥಮಿಕ ಕೃಷಿ ಪತ್ತಿನ ಸರಕಾರ ಸಂಘದಲ್ಲಿ ದುಡಿಯುತ್ತಿರುವ ಎಲ್ಲಾ ವರ್ಗದ ನೌಕರರಿಗೆ ಸೇವಾ ಭದ್ರತೆ, ವೇತನ ಶ್ರೇಣಿ, ಪಿಂಚಣಿ ಹಾಗೂ ಇತರೆ ಸೌಲಭ್ಯಗಳನ್ನು ಜಾರಿಗೆ ತರಲು ನೌಕರರು ರಾಜ್ಯಮಟ್ಟದ ಪ್ರಾಧಿಕಾರ ರಚಿಸಲು ಸರಕಾರ ಕಾಯ್ದೆ ತಿದ್ದುಪಡಿ ತರಬೇಕೆಂದು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ