Breaking News

Dharwad-Belagavi; ಹೊಸ ರೈಲು ಮಾರ್ಗಕ್ಕೆ ಮೋದಿಯಿಂದ ಶಂಕು ಸ್ಥಾಪನೆ

Spread the love

ಧಾರವಾಡ, ಡಿಸೆಂಬರ್ 26; ಬಹುವರ್ಷಗಳ ಬೇಡಿಕೆಯಾದ ಧಾರವಾಡ-ಕಿತ್ತೂರು-ಬೆಳಗಾವಿ ಹೊಸ ನೇರ ರೈಲು ಮಾರ್ಗ ಯೋಜನೆಗೆ ಇನ್ನೂ ಶಂಕುಸ್ಥಾಪನೆಯಾಗಿಲ್ಲ. ಈ ಯೋಜನೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಬೆಳಗಾವಿ ಸಂಸದ ದಿ. ಸುರೇಶ್ ಅಂಗಡಿ ಕನಸಾಗಿದೆ.

2023ರಲ್ಲಿ ಧಾರವಾಡ-ಕಿತ್ತೂರು-ಬೆಳಗಾವಿನೇರ ರೈಲು ಮಾರ್ಗ ಯೋಜನೆಗೆ ಶಂಕು ಸ್ಥಾಪನೆ ನಡೆಯಲಿದೆ.

ಎರಡು ವರ್ಷಗಳ ಹಿಂದೆ ಘೋಷಣೆಯಾದ ಯೋಜನೆ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ ಎಂಬುದು ಜನರ ಆರೋಪವಾಗಿದೆ.

 

2021-22ರ ಕೇಂದ್ರ ಬಜೆಟ್‌ನಲ್ಲಿ ಈ ಯೋಜನೆಗೆ 50 ಕೋಟಿ ಮೀಸಲಾಗಿತ್ತು. ಭೂ ಸ್ವಾಧೀನ ಪ್ರಕ್ರಿಯೆಯ ಸಮಸ್ಯೆಯ ಕಾರಣ ಯೋಜನೆ ಅನುಷ್ಠಾನ ತಡವಾಗುತ್ತಿದೆ. ಹೊಸ ರೈಲು ಮಾರ್ಗ ಯೋಜನೆಗೆ ಕರ್ನಾಟಕ ಸರ್ಕಾರ ಸಹ 463 ಕೋಟಿ ರೂ. ಅನುದಾನ ಘೋಷಣೆ ಮಾಡಿದೆ.

 

ಧಾರವಾಡ-ಕಿತ್ತೂರು-ಬೆಳಗಾವಿ ನೇರ ರೈಲು ಮಾರ್ಗ ಯೋಜನೆ ಅನುಷ್ಠಾನದಿಂದ ಹಣ, ಸಮಯ ಎರಡೂ ಉಳಿತಾಯವಾಗಲಿದೆ. 2019ರಲ್ಲಿ ಈ ಹೊಸ ರೈಲು ಮಾರ್ಗ ಯೋಜನೆ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಕೇಂದ್ರ ಸರ್ಕಾರ ಯೋಜನೆಗೆ ಒಪ್ಪಿಗೆ ನೀಡಿತ್ತು.

 

ಜನವರಿ 12ರಂದು ಯೋಜನೆಗೆ ಶಂಕು ಸ್ಥಾಪನೆ
 ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಈ ಕುರಿತು ಮಾಹಿತಿ ನೀಡಿದ್ದಾರೆ. ಧಾರವಾಡ-ಕಿತ್ತೂರು-ಬೆಳಗಾವಿ ನೇರ ರೈಲು ಮಾರ್ಗ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ಮಾಡುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ