Breaking News

ಸುರೇಶ ಅಂಗಡಿ ಅವರ ಮನೆಗೆb.s.y.ಭೇಟಿ ,ಟಿಕೆಟ್ಬಿಜೆಪಿ ಯುವ ನಾಯಕರು ಲಾಭಿ ನಡೆಸ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.

Spread the love

ಬೆಳಗಾವಿ: ದಿ.ಸುರೇಶ ಅಂಗಡಿ ನಿಧನ ಹಿನ್ನೆಲೆ ಖಾಲಿ ಇರುವ ಬೆಳಗಾವಿ ಲೋಕಸಭಾ ಕ್ಷೇತ್ರ ಚುನಾವಣೆಗೆ ದಿನಾಂಕ ಘೋಷಣೆ ಯಾಗುವ ಮುನ್ನವೇ ಮಾಜಿ ಶಾಸಕ , ಬಿಜೆಪಿ ನಾಯಕರು ಟಿಕೆಟ್‍ಗಾಗಿ ಲಾಭಿ ನಡೆಸಿದ್ದಾರೆ.

ರಾಜ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸುರೇಶ ಅಂಗಡಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ನೀಡಲು ಬೆಳಗಾವಿಗೆ ಆಗಮಿಸಿದ್ದಾರೆ. ಇದರ ಮಧ್ಯದಲ್ಲಿಯೇ ಚುನಾವಣೆ ದಿನಾಂಕ ಘೋಷಣೆ ಮುನ್ನವೇ ಬಿಜೆಪಿ ನಾಯಕರ ಟಿಕೆಟ್‍ಗಾಗಿ ಕಸರತ್ತು ಜೋರಾಗಿ ನಡೆಸಿದ್ದಾರೆ.

ಮಾಜಿ ಶಾಸಕ ಸಂಜಯ್ ಪಾಟೀಲ, ಯುವ ಮುಖಂಡರಾದ ರಾಜು ಚಿಕ್ಕನಗೌಡ್ರ, ಎಂ.ಬಿ.ಜಿರಲಿ ಸೇರಿದಂತೆ ಹಲವರು ಸಿಎಂ ಜತೆ ಚರ್ಚೆ ನಡೆಸಿ, ಸುರೇಶ ಅಂಗಡಿ ಕುಟುಂಬದವರಿಗೆ ಟಿಕೆಟ್ ನೀಡದಿದ್ದರೆ, ನಮ್ಮನ್ನು ಪರಿಗಣಿಸಿ ಎಂದು ಬಿಜೆಪಿ ಯುವ ನಾಯಕರು ಲಾಭಿ ನಡೆಸ ತೊಡಗಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಬಿಜೆಪಿ ನಾಯಕರು ಬೆಳಗಾವಿ ಲೋಕಸಭಾ ಚುನಾವಣೆಗೆ ಸುರೇಶ ಅಂಗಡಿ ಅವರ ಕುಟುಂಬದವರಿಗೆ ನೀಡಿದರೆ, ಅನುಕಂಪದ ಆದಾರದ ಮೇಲೆ ಗೆಲುವು ಸಾಧಿಸಬಹುದು ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಇತ್ತ ಕೇಂದ್ರ ಯುವ ನಾಯಕರನ್ನು ಆಯ್ಕೆ ಮಾಡುವ ಲೆಕ್ಕಾಚಾರದಲ್ಲಿ ಇದೆ.

ಬಿಜೆಪಿ ರಾಷ್ಟ್ರೀಯ ನಾಯಕರ ಚಿಂತನೆಯ ಬೇರೆಯಾಗಿದೆ. ಈ ಹಿಂದೆ ರಾಜ್ಯಸಭಾ, ಲೋಕಸಭಾ ಚುನಾವಣೆಯನ್ನು ಗಮನಿಸಿದರೆ, ಹೊಸ ಮುಖಗಳು ಆಯ್ಕೆ ಮಾಡಿದ್ದಾರೆ. ಈಗಲೂ ಹೊಸಬರಿಗೆ ಮಣೆ ಹಾಕಬಹುದು ಎನ್ನಲಾಗುತ್ತಿದೆ.

ಒಟ್ಟಾರೆ ಚುನಾವಣೆ ದಿನಾಂಕಗೂ ಮೊದಲೇ ಟಿಕೆಟ್ ಗೆ ಕಸರತ್ತ ನಡೆದಿದ್ದು, ರಾಜ್ಯ, ರಾಷ್ಟ್ರೀಯ ಬಿಜೆಪಿ ನಾಯಕರು ಯಾರಿಗೆ ಟಿಕೆಟ್ ಕೊಡಲಿದ್ದಾರೆ ಎಂದು ಕಾದುನೋಡಬೇಕಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ