ಜನಾರ್ದನ ರೆಡ್ಡಿ ಹೊಸ ಪಕ್ಷ ಘೋಷಿಸಿದ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್​ ಪತನ!

Spread the love

ಳ್ಳಾರಿ: ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಸ್ಥಾಪಿಸುವ ಮೂಲಕ ಡಿ.25ರಂದು ರಾಜ್ಯ ಬಿಜೆಪಿಗೆ ಗಾಲಿ ಜನಾರ್ದನ ರೆಡ್ಡಿ ಶಾಕ್​ ಕೊಟ್ಟಿದ್ದರು. ಇದೀಗ ಜನಾರ್ದನ ರೆಡ್ಡಿ ಅವರ ಕಟ್ಟಾ ಬೆಂಬಲಿಗ ದಮ್ಮೂರು ಶೇಖರ್ ಅವರು ಬಳ್ಳಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಗಮನ ಸೆಳೆದಿದ್ದಾರೆ.

 

ಜನಾರ್ದನ ರೆಡ್ಡಿ ಅವರು ಹೊಸ ಪಕ್ಷ ಘೋಷಿಸಿದ ಬೆನ್ನಲ್ಲೇ ಬಿಜೆಪಿಯ ಮೊದಲ ವಿಕೆಟ್ ಪಥ‌ನವಾಗಿದೆ. ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ದಮ್ಮೂರು ಶೇಖರ್ ರಾಜೀನಾಮೆ ನೀಡಿದ್ದಾರೆ. ಇವರು ಬುಡಾ ಮಾಜಿ ಅಧ್ಯಕ್ಷ ಕೂಡ.

ದಕ್ಷಿಣ ಭಾರತದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವಲ್ಲಿ ಜನಾರ್ದನ ರೆಡ್ಡಿ ಪಾತ್ರ ಪ್ರಮುಖವಾಗಿತ್ತು. ಆದರೆ ಇತ್ತೀಚಿಗೆ ಜನಾರ್ದನ ರೆಡ್ಡಿ ಅವರನ್ನ ಬಿಜೆಪಿ ನಡೆಸಿಕೊಂಡ ರೀತಿ ಸರಿಯಿಲ್ಲ. ಇದೇ ಕಾರಣಕ್ಕೆ ಪಕ್ಷಕ್ಕೆ ರಾಜೀನಾಮೆ ನೀಡುತ್ತಿವೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿ ಬಳ್ಳಾರಿ ಜಿಲ್ಲಾಧ್ಯಕ್ಷರಿಗೆ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಮನವಿ

Spread the loveಬೆಳಗಾವಿ : ನಗರದ ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ನೇಕಾರರ ಬಳಗದ ಸದಸ್ಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ