ಬೆಳಗಾವಿ: “ಕರ್ನಾಟಕ ಕೈಗಾರಿಕಾ ಪ್ರದೇಶಾಭಿ ವೃದ್ಧಿ ಮಂಡಳಿ (ಕೆಐಎಡಿಬಿ) ವತಿಯಿಂದ ಕೈಗಾರಿಕೆಗಳ ಸ್ಥಾಪನೆಗೆ ಸ್ವಾಧೀನಪಡಿಸಿಕೊಂಡ ಜಮೀನಿನ ಸಮಗ್ರ ಲೆಕ್ಕ ಪರಿಶೋಧನೆಗೆ (ಲ್ಯಾಂಡ್ ಆಡಿಟ್) 3 ತಿಂಗಳ ಹಿಂದೆ ಆದೇಶಿಸಲಾಗಿದೆ.
ವರದಿ ಬಂದ ಕೂಡಲೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ವಿಧಾನಸಭೆಯಲ್ಲಿ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ವಿಧೇಯಕದ ಮೇಲಿನ ಚರ್ಚೆ ವೇಳೆ ಮಾತ ನಾಡಿ, ಉಕ್ಕು ಮತ್ತು ಉಷ್ಣ ಸ್ಥಾವರ ಸೇರಿದಂತೆ ವಿವಿಧ ಕೈಗಾರಿಕೆಗಳ ಸ್ಥಾಪನೆಗೆ ಜಮೀನು ಪಡೆದು 8-10 ವರ್ಷಗಳಾದರೂ ಕೈಗಾರಿಕೆಗಳನ್ನು ಸ್ಥಾಪಿಸಿಲ್ಲ. ಹೀಗಾಗಿ 10 ವರ್ಷಗಳಲ್ಲಿ ಯಾವ ಕೈಗಾರಿಕೆ ಸ್ಥಾಪನೆಗೆ ಯಾವ ಕಂಪೆನಿಗೆ ಎಷ್ಟು ಜಮೀನು ಮಂಜೂರು,ಹಂಚಿಕೆ ಆಗಿದೆ, ಜಮೀನು ದುರ್ಬಳಕೆ ಆಗಿದೆಯೇ, ಕೈಗಾರಿಕೆ ಸ್ಥಾಪಿಸ ದಿರುವುದಕ್ಕೆ ಕಾರಣವೇನು ಎಂಬ ಬಗ್ಗೆ ವರದಿ ಕೇಳಿದ್ದು, ಬಂದ ಕೂಡಲೇ ಸದನದ ಮುಂದಿಡುವೆ ಎಂದರು.
Laxmi News 24×7