Breaking News

ಅಪ್ಪು ಅಭಿಮಾನಿಗಳ ಬೃಹತ್ ಪ್ರತಿಭಟನೆ : ವಿರೋಧಿಗಳಿಗೆ ಖಡಕ್‌ ವಾರ್ನಿಂಗ್‌ ರವಾನೆ..!

Spread the love

ಬೆಂಗಳೂರು : ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಹಾಗೂ ರಾಜ್‌ ಕುಟುಂಬದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಾಕಲಾಗುತ್ತಿದ್ದು, ಇದರಿಂದ ಆಕ್ರೋಶಗೊಂಡಿರುವ ಅಪ್ಪು ಅಭಿಮಾನಿಗಳು ಇಂದು ರಾಜ್ಯ ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

 

ಸಾಮಾಜಿಕ ಮಾಧ್ಯಮಗಳಲ್ಲಿಪುನೀತ್ ರಾಜಕುಮಾರ್ಅವರ ಕುರಿತು ಇಲ್ಲ ಸಲ್ಲದ ಆರೋಪಗಳು ಹಾಗೂ ಅವಹೇಳನಕಾರಿ ಮಾತುಗಳು ಕೇಳಿ ಬರುತ್ತಿವೆ. ಇದರಿಂದ ಕೋಪಗೊಂಡಿರುವ ಅವರ ಫ್ಯಾನ್ಸ್‌ ಬೃಹತ್ ಬಹಿರಂಗ ಸಭೆ ಮತ್ತು ಪ್ರತಿಭಟನೆಯನ್ನು ಹಮ್ಮಿಹೊಂಡಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಪ್ಪು ಫ್ಯಾನ್ಸ್ ಗೆ ಹತ್ತಾರು ಕನ್ನಡಪರ ಸಂಘಟನೆಗಳು ಸಾಥ್ ನೀಡಿವೆ.

 

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಬಗ್ಗೆ ಅಪ್ಪು ಫ್ಯಾನ್ಸ್ ಅಸಮಾಧನಗೊಂಡಿದ್ದು, ನೆಚ್ಚಿನ ನಟನ ಬಗ್ಗೆ ಇಲ್ಲ ಸಲ್ಲದ ಮಾತುಗಳಿಂದ ನೊಂದುಕೊಂಡಿದ್ದಾರೆ. ಅದಕ್ಕಾಗಿ ಪುನೀತ್ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡೋರಿಗೆ ಅಪ್ಪು ಫ್ಯಾನ್ಸ್ ವಾರ್ನಿಂಗ್ ನೀಡಲು ಮುಂದಾಗಿದ್ದಾರೆ. ಅಣ್ಣಾವ್ರ ಹೆಸರಿಗೆ ಮಸಿ ಬಳಿದ್ರೆ ಸುಮ್ಮನಿರಲ್ಲ ಎಂದು ಹೇಳಲು ಹೊರಟಿದ್ದಾರೆ. ಫ್ಯಾನ್ಸ್ ಮಧ್ಯೆ ತಂದಿಟ್ಟು ತಮಾಷೆ ನೋಡೋರ ವಿರುದ್ಧ ಅಪ್ಪು ಫ್ಯಾನ್ಸ್ ಗರಂ ಆಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅಂದ್ರೆ ಹೊಸಪೇಟೆಯಲ್ಲಿ ದರ್ಶನ್‌ಗೆ ಅವಮಾನ ನಡೆದ ಘಟನೆ ಬಳಿಕೆ ಸೋಷಿಯಲ್‌ ಮೀಡಿಯಾದಲ್ಲಿ ಅಪ್ಪು ಹಾಗೂ ದಚ್ಚು ಅಭಿಮಾನಿಗಳ ನಡುವೆ ವಾರ್‌ ಜಾಸ್ತಿಯಾಗಿದೆ. ಇದೇ ಸಮಯದಲ್ಲಿ ಕೆಲವು ಕಿಡಿಗೇಡಿಗಳು ರಾಜ್‌ ಕುಟುಂಬ ಮತ್ತು ಪುನೀತ್‌ ರಾಜ್‌ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಅಲ್ಲದೆ ಟ್ರೋಲ್‌ ಮಾಡುತ್ತಿದ್ದಾರೆ.


Spread the love

About Laxminews 24x7

Check Also

ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮ

Spread the love ನವೆಂಬರ 9 ರಂದು ನಡೆಯಲಿರುವ ಗೋಕಾಕ ಹಿಲ್ ಹಾಫ್ ಮ್ಯಾರಥಾನ್ ಕಾರ್ಯಕ್ರಮಕ್ಕೆ ಬೆಳಗಾವಿ ಮರಾಠಾ ಲಘು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ