ಪ್ರಸಕ್ತ ವರ್ಷ 15 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಇನ್ನೂ 15,000 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಪೂರಕ ಅಂದಾಜು ಮೇಲಿನ ಚರ್ಚೆಯ ಸಂದರ್ಭದಲ್ಲಿ ಉತ್ತರಿಸಿದ ಅವರು, ಇನ್ನು 15,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು.
8000 ಶಾಲಾ ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಕಾಲೇಜು ಉಪನ್ಯಾಸಕರು, ಸಹ ಪ್ರಾಧ್ಯಾಪಕರು ಹಾಗೂ ಪ್ರಾಧ್ಯಾಪಕರ ಬೋಧನಾ ಕಾರ್ಯ ಶೈಲಿ ಬದಲಾವಣೆ ಮಾಡಲಿದ್ದು ಮುಂದಿನ ಬಜೆಟ್ ನಲ್ಲಿ ಈ ಬಗ್ಗೆ ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.
Laxmi News 24×7