ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೊಡುತ್ತೇವೆ ಎಂದು ವರಿಷ್ಠರು ಭರವಸೆ ಕೊಟ್ಟಿದ್ದಾರೆ. ಆ ಭರವಸೆ ಈಡೇರಿಸುತ್ತಾರೆಂದು ಅಥಣಿ ಶಾಸಕ ಮಹೇಶ್ ಕುಮಟಹಳ್ಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವುದಾಗಿ ಪಕ್ಷದ ವರಿಷ್ಠರು ಭರವಸೆ ಕೊಟ್ಟಿದ್ದಾರೆ.
ಅದನ್ನು ಈಡೇರಿಸುತ್ತಾರೆ. ತಾನೂ ಕೂಡ ಸುಮ್ಮನೆ ಕುಳಿತಿಲ್ಲ. ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದರು.
ಲಕ್ಷ್ಮಣ ಸವದಿ ಅವರಿಗೆ ಟಿಕೆಟ್ ನೀಡುವ ಸಂಬಂಧ ಪ್ರತಿಕ್ರಿಯಿಸಿ, ಅವರು ಎಂಎಲ್ಸಿ, ನಾನು ಎಂಎಲ್ಸ್ ಎ ಇದ್ದೇನೆ. ಇಬ್ಬರೂ ಪಕ್ಷದ ಕೆಲಸ ಮಾಡುತ್ತಿದ್ದೇವೆ. ಟಿಕೆಟ್ ಕೊಡುವುದು ಬಿಡುವುದು ವರಿಷ್ಠರಿಗೆ ಬಿಟ್ಟಿದ್ದು. ಒಬ್ಬರಿಗೆ ಎಂಎಲ್ಸಿ, ಎಂಎಲ್ಸ್ ಎ ಟಿಕೆಟ್ ಕೊಡುತ್ತಾರೆ. ವರಿಷ್ಠರು ಏನು ಹೇಳುತ್ತಾರೊ ಅದರಂತೆ ನಡೆದುಕೊಳ್ತೇವೆ. ಯಾವುದೇ ಅಸಮಾಧಾನ ಇಲ್ಲ ಎಂದು ಹೇಳಿದರು.
Laxmi News 24×7