Breaking News
Home / ರಾಜಕೀಯ / ಮೋದಿ ಎಷ್ಟು ಸಲ ಬೇಕಾದರೂ ರಾಜ್ಯಕ್ಕೆ ಬರಲಿ, ರಾಜ್ಯದಲ್ಲಿ ಗೆಲ್ಲಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ಮೋದಿ ಎಷ್ಟು ಸಲ ಬೇಕಾದರೂ ರಾಜ್ಯಕ್ಕೆ ಬರಲಿ, ರಾಜ್ಯದಲ್ಲಿ ಗೆಲ್ಲಲು ಸಾಧ್ಯವಿಲ್ಲ: ಸಿದ್ದರಾಮಯ್ಯ

Spread the love

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಎಷ್ಟು ಬಾರಿ ಬೇಕಾದರೂ ರಾಜ್ಯಕ್ಕೆ ಬಂದರೂ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜಾದೂ ನಡೆಯಲ್ಲ.

ಮೋದಿ ಎಷ್ಟು ಬಾರಿ ಬಂದರೂ ಬಿಜೆಪಿ ಗೆಲ್ಲಲ್ಲ ಎಂದರು.

ಅಮಿತ್ ಶಾ ಬಂದಾಕ್ಷಣ ರಾಜ್ಯದಲ್ಲಿ ಬಿಜೆಪಿ ಗೆಲ್ಲುತ್ತದೆಯೆಂದು ಹೇಳಲು ಆಗುತ್ತದೆಯೇ. ಅಮಿತ್ ಶಾ ಜಾದೂ ಮಾಡುತ್ತಾರಾ? ಅವರ ತಂತ್ರ ಕೆಲಸ ಮಾಡಲ್ಲ ಎಂದು ತಿಳಿಸಿದರು.

ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಅಧಿಕಾರದಲ್ಲಿ ಇಲ್ಲ. ಕರ್ನಾಟಕದಲ್ಲಿ ಅಮಿತ್ ಶಾ ಹಾಗೂ ಮೋದಿ ಜಾದೂ ನಡೆಯಲು ಸಾಧ್ಯವಿಲ್ಲ. ಜನರಿಗೆ ಬಿಜೆಪಿಯವರ ಕಳ್ಳಾಟ ಗೊತ್ತಾಗಿದೆ ಎಂದರು.

ಕಳಸಾ ಬಂಡೂರಿ ನಾಲಾ ವಿವಾದ ಸಂಬಂಧ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಚುನಾವಣಾ ಗಿಮಿಕ್. ಇವೆಲ್ಲಾ ನಡೆಯಲ್ಲ. ಗೆಜೆಟ್ ನೋಟಿಫಿಕೇಶನ್ ಆಗಿ ಎರಡು ವರ್ಷವಾಯ್ತು. ಎರಡು ವರ್ಷ ಏನು ಮಾಡುತ್ತಿದ್ದರು. ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರ ಇದ್ದರೂ ಯಾಕೆ ಮಾಡಲಿಲ್ಲ. ಈಗ ಚುನಾವಣೆ ಬರುತ್ತಿದೆ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದೂರಿದರು.


Spread the love

About Laxminews 24x7

Check Also

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

Spread the love ಪಣಜಿ: ಝೋಸ್ಕಾ ಆಯಪ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವುದಾಗಿ ಹೇಳಿ ಮಹಿಳೆಯೊಬ್ಬರು 2.71 ಲಕ್ಷ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ