Breaking News

ಐದು ಮೆಗಾ ಹಾಸ್ಟೆಲ್‌ಗಳ ನಿರ್ಮಾಣ:C.M. ಬೊಮ್ಮಾಯಿ

Spread the love

ಬೆಳಗಾವಿ: ‘ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯದ ಐದು ಸ್ಥಳಗಳಲ್ಲಿ ಮೆಗಾ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಗುರುವಾರ 2022-23ನೇ ಸಾಲಿನ ಪೂರಕ ಅಂದಾಜಿನ ಎರಡನೇ ಕಂತಿನ ಬೇಡಿಕೆಗಳ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ‘ಪ್ರಥಮ ಬಾರಿ ಮೆಗಾ ಹಾಸ್ಟೆಲ್‌ ಯೋಜನೆಯನ್ನು ಜಾರಿಗೊಳಿಸುತ್ತಿದ್ದೇವೆ.

ಮಂಗಳೂರು, ಧಾರವಾಡ, ಮೈಸೂರು, ಕಲಬುರಗಿ ಮತ್ತು ಬೆಂಗಳೂರಿನಲ್ಲಿ ಈ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುವುದು’ ಎಂದು ತಿಳಿಸಿದರು.

‘ಅಗತ್ಯವಿದ್ದರೆ ಇತರ ಶೈಕ್ಷಣಿಕ ಕೇಂದ್ರಗಳಲ್ಲಿ ಮೆಗಾ ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುವುದು. ಈ ಯೋಜನೆಯಿಂದ ಪರಿಶಿಷ್ಟರು ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದ’ ಎಂದು ಹೇಳಿದರು.

‘ಉನ್ನತ ಶಿಕ್ಷಣದಲ್ಲಿ ಪ್ರಾಧ್ಯಾಪಕರಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಪ್ರಯೋಜನದ ಬಗ್ಗೆಯೂ ಮೌಲ್ಯಮಾಪನ ಮಾಡಬೇಕಾಗಿದೆ. ಒಟ್ಟಾರೆ ಮುಂದಿನ ಐದು ವರ್ಷಗಳಲ್ಲಿ ಈ ಬದಲಾವಣೆಗಳನ್ನು ತರಲಾಗುವುದು’ ಎಂದು ವಿವರಿಸಿದರು.


Spread the love

About Laxminews 24x7

Check Also

ರಾಷ್ಟ್ರಮಟ್ಟದ ಜೂಡೋ ಸ್ಪರ್ಧೆಯಲ್ಲಿ ಬೆಳಗಾವಿಯ ಕಾವೇರಿ ಸೂರ್ಯವಂಶಿಗೆ ಕಂಚಿನ ಪದಕ

Spread the love ರಾಷ್ಟ್ರಮಟ್ಟದ ಜೂಡೋ ಸ್ಪರ್ಧೆಯಲ್ಲಿ ಬೆಳಗಾವಿಯ ಕಾವೇರಿ ಸೂರ್ಯವಂಶಿಗೆ ಕಂಚಿನ ಪದಕ ಪಂಜಾಬ್‌ನ ಲೂಧಿಯಾನದಲ್ಲಿ ನಡೆಯುತ್ತಿರುವ 69ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ