Breaking News

ಮಾಹಿತಿ ಹಕ್ಕು ಆಯುಕ್ತ ಕೆ.ಪಿ. ಮಂಜುನಾಥ್, ಕೆಪಿಎಸ್‍ಸಿಗೆ 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

Spread the love

ಬೆಂಗಳೂರು:   ಹಲವು ಬಾರಿ ಅಕ್ರಮಗಳ ಆರೋಪಗಳಿಗೆ ಗುರಿಯಾಗಿರುವ ಕೆಪಿಎಸ್‌ಸಿ ಈಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ.  ಮಾಹಿತಿ ಹಕ್ಕು ಕಾಯ್ದೆ ಅನ್ವಯ ಮಾಹಿತಿ ಒದಗಿಸದ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಮಾಹಿತಿ ಹಕ್ಕು ಆಯೋಗ ಒಂದು ಲಕ್ಷ ರೂ. ದಂಡ ವಿಧಿಸಿ ಆದೇಶ ಮಾಡಿದೆ. ದಂಡದ ಹಣವನ್ನು ಮಾಹಿತಿ ಕೇಳಿರುವ ಅರ್ಜಿದಾರರಿಗೆ ನೀಡುವಂತೆ ಸೂಚಿಸಿದೆ.

ಸುಧನ್ವ ಭಂದೋಲ್ಕರ್ ಎನ್ನುವವರು 2015ರ ಕೆಪಿಎಸ್‌ಸಿ ಪ್ರೊಬೇಷನರಿ ಹುದ್ದೆಯ ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ನೀಡುವಂತೆ ಕೆಪಿಎಸ್‍ಸಿಗೆ ಮಾಹಿತಿ ಹಕ್ಕು ಕಾಯ್ದೆ ಅನ್ವಯ ಮನವಿ ಮಾಡಿಕೊಂಡಿದ್ದರೂ, ಕೆಪಿಎಸ್‌ಸಿ ಸೆಕ್ಸನ್ ಅಧಿಕಾರಿ ಶಶಿಕಲಾ ಅವರನ್ನು ಅಲೆದಾಡಿಸಿದ್ದಾರೆ.

ಈ ಬಗ್ಗೆ ಸುಧನ್ವ ಭಂದೋಲ್ಕರ್ ಅವರು ಮಾಹಿತಿ ಹಕ್ಕು ಆಯೋಗಕ್ಕೆ ದೂರು ನೀಡಿದ್ದು, ಮಾಹಿತಿ ಹಕ್ಕು ಆಯೋಗ ಮಾಹಿತಿ ನಿರಾಕರಿಸುವುದಕ್ಕೆ ಶಶಿಕಲಾ ಅವರಿಗೆ 25 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿತ್ತು.

ಶಶಿಕಲಾ ಅವರು ಮಾಹಿತಿ ಹಕ್ಕು ಆಯೋಗದ ದಂಡವನ್ನು ಪರಿಗಣಿಸದೇ ಮಾಹಿತಿ ಹಕ್ಕು ಆಯೋಗಕ್ಕೆ ಯಾವುದೇ ಪ್ರತಿಕ್ರಿಯೆ ನೀಡದೇ ನಿರ್ಲಕ್ಷ್ಯ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರ ನಿರ್ಲಕ್ಷ್ಯಕ್ಕೆ ಮಾಹಿತಿ ಹಕ್ಕು ಆಯುಕ್ತ ಕೆ.ಪಿ. ಮಂಜುನಾಥ್, ಕೆಪಿಎಸ್‍ಸಿಗೆ 1 ಲಕ್ಷ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಈ ದಂಡದ ಮೊತ್ತವನ್ನು ಶಶಿಕಲಾ ಅವರ ಸಂಬಳದಿಂದ ಪ್ರತಿ ತಿಂಗಳು ಕಡಿತಗೊಳಿಸುವಂತೆ ನಿರ್ದೇಶನ ನೀಡಿದ್ದಾರೆ.


Spread the love

About Laxminews 24x7

Check Also

ಕಾರದಗಾ ಗ್ರಾಮದ ಅಭಿವೃದ್ಧಿಯೇ ನನ್ನ ಧ್ಯೇಯ

Spread the loveಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ. ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಲಾಯಿತು.ಇದಕ್ಕೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ