ಪಣಜಿ: ರಜೆಯ ನಿಮಿತ್ತ ಗೋವಾಕ್ಕೆ ಕ್ರಿಸ್ಮಸ್ ಪಾರ್ಟಿ ಮಾಡಲು ಸ್ನೇಹಿತರ ಜೊತೆ ತೆರಳಿದ್ದ 18 ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಬಸ್ ಚಾಲಕನೇ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಮುಂಬೈ ಮೂಲದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಶನಿವಾರದಂದು ಆರೋಪಿಯ ಬಸ್‌ನಲ್ಲಿ ಈ ಘಟನೆ ನಡೆದಿದೆ.
ಆರೋಪಿಯು ವಾಸ್ಕೋದ ಜುವಾರಿನಗರದ ನಿವಾಸಿಯಾಗಿದ್ದಾನೆ. ಸಂತ್ರಸ್ತೆ 14 ಜನ ಸ್ನೇಹಿತರ ಜತೆಗೂಡಿ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದಳು. ಈ ಸಂದರ್ಭದಲ್ಲಿ ಆಕೆಯ ಸ್ನೇಹಿತೆಯರು ಮದ್ಯಪಾನ ಮಾಡಲು ಆರಂಭಿಸಿದ್ದರು. ಇದರಿಂದ ಕಸಿವಿಸಿಗೊಂಡ ವಿದ್ಯಾರ್ಥಿನಿ ಬಸ್ಗೆ ವಾಪಸ್ ಬಂದಿದ್ದಾಳೆ. ಈ ಸಂದರ್ಭದಲ್ಲಿ ಘಟನೆ ನಡೆದಿದೆ.
ಈ ಸ್ನೇಹಿತರು ಬಸ್ ಅನ್ನು ಬಾಡಿಗೆಗೆ ಪಡೆದಿದ್ದರು. ಆರೋಪಿಯನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
Laxmi News 24×7