ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ರಾತ್ರಿ ನಗರಕ್ಕೆ ಆಗಮಿಸಿ ಸಿದ್ದೇಶ್ವರ ಶ್ರೀಗಳ ಆರೋಗ್ಯ ವಿಚಾರಿಸಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ರಾತ್ರಿ 10-30 ರ ಸುಮಾರಿಗೆ ನಗರದ ಜ್ಞಾನಯೋಗಾಶ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಕೇಂದ್ರ ಸಚಿವ ಜೋಶಿ ಶ್ರೀಗಳ ದರ್ಶನ ಪಡೆದರು.
ಬಳಿಕ ಕನ್ಹೇರಿ ಕಾಡಸಿದ್ದೇಶ್ವರ ಮಠದ ಶ್ರೀಗಳು, ಜ್ಞಾನಯೋಗಾಶ್ರಮದ ಮುಖ್ಯಸ್ಥರಾದ ಬಸವಲಿಂಗ ಶ್ರೀಗಳೊಂದಿಗೆ ಸಿದ್ದೇಶ್ವರ ಶ್ರೀಗಳ ಆರೋಗ್ಯದ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಿದರು.
ನಂತರ ಸಿದ್ದೇಶ್ವರ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದೊಂದಿಗೂ ಚರ್ಚೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶ್ರೀಗಳ ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಲು ಸೂಚಿಸಿದರು.