Breaking News

ಕೋವಿಡ್ ತಡೆಗಟ್ಟಲು ಕ್ರಮ ಕೈಗೊಂಡ   ಬಗ್ಗೆ ನಗರದ ಪ್ರವಾಸಿ  ಮಂದಿರದಲ್ಲಿ ಹಿರಿಯ ಅಧಿಕಾರಿಗಳ ಸಭೆ

Spread the love

ಬೆಳಗಾವಿ:  ಕೋವಿಡ್ ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ರು.

ಕೋವಿಡ್ ತಡೆಗಟ್ಟಲು ಕ್ರಮ ಕೈಗೊಂಡ   ಬಗ್ಗೆ ನಗರದ ಪ್ರವಾಸಿ  ಮಂದಿರದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು,  ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು.

ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸುವ ಮೂಲಕ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಅಂತರ ಪಾಲನೆಗೆ ಮೊದಲ ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು.

ಕೇಂದ್ರ ಸರ್ಕಾರ ನೀಡಲಿರುವ ಹೊಸ ಮಾರ್ಗಸೂಚಿ ಆಧರಿಸಿ, ಇನ್ನಷ್ಟು ಚಟುವಟಿಕೆಗಳು ಆರಂಭಗೊಳ್ಳಲಿರುವುದರಿಂದ ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಮಾಹಿತಿಯನ್ನು ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಸದ್ಯಕ್ಕೆ ಸೋಂಕು ಹಾಗೂ ಮರಣ ಪ್ರಮಾಣದಲ್ಲಿ ಕ್ರಮೇಣ ಇಳಿಕೆ ಕಂಡುಬರುತ್ತಿದೆ ಎಂದು ತಿಳಿಸಿದರು.

ಗೃಹ ಸಚಿವ  ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ, ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ಜಿಪಂ ಸಿಇಒ ದರ್ಶನ್ ಎಚ್.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ, ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ, ಬೆಳಗಾವಿ ಉಪ ವಿಭಾಗಾಧಿಕಾರಿಗಳಾದ ಅಶೋಕ ತೇಲಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ