Breaking News

ಸಂಕ್ರಾಂತಿಯೊಳಗೆ ‘ಕೈ’ ಮೊದಲ ಪಟ್ಟಿ ಬಿಡುಗಡೆ; ಖರ್ಗೆ ಜತೆ ಡಿಕೆಶಿ ಚರ್ಚೆ

Spread the love

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವ ವಿಚಾರದಲ್ಲಿ 3-4 ಜಿಲ್ಲೆಗಳು ಮಾತ್ರ ಹಿಂದುಳಿದಿದ್ದು, ಸಂಕ್ರಾಂತಿಯೊಳಗೆ ಮೊದಲ ಪಟ್ಟಿ ಬಿಡುಗಡೆಗೊಳಿಸುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಳಿ ಮಹತ್ವದ ಚರ್ಚೆ ನಡೆಸಿದ್ದಾರೆ.

 

ಭಾನುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿ ಹೊಸ ವರ್ಷದ ಶುಭಾಶಯ ತಿಳಿಸಿದ ಬಳಿಕ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಶಿಫಾರಸಿಗೆ ಜಿಲ್ಲಾ ಸಮಿತಿಗಳಿಗೆ ಡಿ.31ರವರೆಗೆ ಗಡುವು ನೀಡಲಾಗಿತ್ತು. 3-4 ಜಿಲ್ಲೆಗಳಲ್ಲಿ ಇನ್ನೂ ಸಭೆ ನಡೆದಿಲ್ಲ. ಮೂರು ದಿನಗಳಲ್ಲಿ ಲಿಸ್ಟ್‌ ಕಳುಹಿಸಲಿದ್ದು, ಬಳಿಕ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಹೀಗಾಗಿ ಸಂಕ್ರಾಂತಿಯೊಳಗೆ ಮೊದಲ ಪಟ್ಟಿಬಿಡುಗಡೆ ಸಾಧ್ಯತೆಯಿದೆ.


Spread the love

About Laxminews 24x7

Check Also

ನಮಗೇ ಕುಡಿಯೋಕೆ ನೀರಿಲ್ಲ, ತಮಿಳುನಾಡಿಗೆ ಬಿಟ್ರೆ ಬೀದಿಗಿಳಿದು ಉಗ್ರ ಹೋರಾಟ – ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ

Spread the loveಮಂಡ್ಯ: ರಾಜ್ಯದಲ್ಲಿ ಮಳೆಯ ಅಭಾವದಿಂದ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿರುವಾಗ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ