ಮೂಡಲಗಿ: ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಈಗಿನಿಂದಲೇ ಬೂಥ್ ಮಟ್ಟದಿಂದ ದುಡಿಯುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಅರಭಾವಿ ಮಂಡಲ ಬೂಥ್ ವಿಜಯ ಅಭಿಯಾನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಕ್ಷದ ಹಿತದೃಷ್ಟಿಯಿಂದ ಕಾರ್ಯಕರ್ತರು ಒಗ್ಗಟ್ಟಿನ ನಾಮಬಲದೊಂದಿಗೆ ಪಕ್ಷದ ಸಾಧನೆಗಳನ್ನು ಮತದಾರರ ಮನೆ ಬಾಗಿಲಿಗೆ ಮುಟ್ಟಿಸುವ ಕೆಲಸ ಮಾಡುವಂತೆ ಹೇಳಿದರು.
ಬಿಜೆಪಿಯು ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪ್ರೀಯ ಕಾರ್ಯಕ್ರಮಗಳನ್ನು ಕಾರ್ಯಕರ್ತರು ಪ್ರಚಾರ ಮಾಡಬೇಕು. ಶಿಸ್ತಿನಿಂದ ಬೂಥ್ ಮಟ್ಟದಿಂದ ಕೆಲಸವನ್ನು ನಿರ್ವಹಿಸಬೇಕು ಎಂದು ತಿಳಿಸಿದರು.
ಪ್ರತಿಯೊಂದು ಮತಗಟ್ಟೆಗಳಲ್ಲಿ ವಾಟ್ಸ್‍ಫ್ ಗುಂಪುಗಳನ್ನು ರಚಿಸಬೇಕು. ಈ ಮೂಲಕ ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡುವಂತಾಗಬೇಕು. ಬಿಜೆಪಿಯ ಎಲ್ಲ ಪೂರ್ವ ನಿಗಧಿತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು ಎಂದು ಹೇಳಿದರು. ಅರಭಾವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ ಇದರ ಅಧ್ಯಕ್ಷತೆ ವಹಿಸಿದ್ದರು.