Breaking News

ರಾಜ್ಯ ಸರ್ಕಾರದಿಂದ ‘ಪಡಿತರ ಚೀಟಿದಾರ’ರಿಗೆ ಭರ್ಜರಿ ಗುಡ್ ನ್ಯೂಸ್ : 1 ಕೆಜಿ ಹೆಚ್ಚುವರಿ ಅಕ್ಕಿ ವಿತರಣೆಗೆ ಅದೇಶ

Spread the love

ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ.

ಈ ಮೂಲಕ ಹೊಸ ವರ್ಷಕ್ಕೆ ರಾಜ್ಯ ಸರ್ಕಾರದಿಂದ ಬಿಗ್ ಗಿಫ್ಟ್ ನೀಡಲಾಗಿದೆ.

ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ ಹಿನ್ನಲೆಯಲ್ಲಿ, ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ ಐದು ಕೆಜಿ ಆಹಾರ ಧಾನ್ಯದೊಂದಿಗೆ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲು ಉದ್ದೇಶಿಸಿದೆ ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಜನವರಿ 2023ರಿಂದ ಜಾರಿಗೆ ಬರುವಂತೆ ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ( Ration Card ) ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ ಐದು ಕೆಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ