Breaking News

ನನ್ನಂತೆ ರಾಜಕೀಯಕ್ಕೆ ಕುಟುಂಬದವರನ್ನು ಕರೆತರದಿರಲು ನಿಮ್ಮಿಂದ ಸಾಧ್ಯವೇ?: ಎಚ್​ಡಿಕೆಗೆ ಪ್ರಹ್ಲಾದ್​ ಜೋಶಿ ಸವಾಲು

Spread the love

ದಗ, ಜ.3: ‘ನಾನು ರಾಜಕೀಯಕ್ಕೆ ಬಂದು 25 ವರ್ಷವಾಯಿತು. ನಾನು ನನ್ನ ಕುಟುಂಬದಿಂದ ಯಾರನ್ನೂ ರಾಜಕೀಯಕ್ಕೆ ಕರೆ ತರುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳುತ್ತೇನೆ. ಅದರಂತೆಯೇ ಕುಮಾರಸ್ವಾಮಿ ಅವರು ಹೇಳಲಿ’ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಸವಾಲು ಹಾಕಿದ್ದಾರೆ.

 

ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಮತ್ತು ರಾಜ್ಯದಲ್ಲಿ ಯಾರ ಗುಂಡಿ ಯಾರು ತೋಡಿದ್ದಾರೆ ಎಂಬುವುದು ಎಲ್ಲರಿಗೂ ಗೊತ್ತಿದೆ. ಜೆಡಿಎಸ್ ಅಂತ ಬಂದಾಗ ಕುಮಾರಸ್ವಾಮಿ, ದೇವೇಗೌಡ್ರು, ರೇವಣ್ಣ, ಪ್ರಜ್ವಲ್ ರೇವಣ್ಣ, ಸೂರಜ್, ನಿಖಿಲ್, ಭವಾನಿ ರೇವಣ್ಣ ಹಾಗೂ ಅನಿತಾ ಕುಮಾರಸ್ವಾಮಿ ಇವರಷ್ಟೇ ಒಂದು ಪಕ್ಷನಾ? ಎಂದು ಪ್ರಶ್ನಿಸಿದರು.

”ಪಕ್ಷ ಅಂದ್ರೆನೇ ಇವರೇ ನಾ? ಇದರಲ್ಲೇ ಭ್ರಷ್ಟಾಚಾರ ಇದೆ ಅನ್ನೋದು ಗೊತ್ತಾಗುತ್ತದೆ” ಎಂದು ಕುಮಾರಸ್ವಾಮಿ ವಿರುದ್ಧ ಪ್ರಹ್ಲಾದ್​ ಜೋಶಿ ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ