Breaking News

ಪಲ್ಸ ಪೊಲಿಯೋ ಮಾದರಿಯಲ್ಲಿ ಲಸಿಕಾ ಅಭಿಯಾನ ಯಶಸ್ಸಿಗೆ ಸೂಚನೆ:

Spread the love

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣದಡಿ ಜಿಲ್ಲೆಯಾದ್ಯಂತ ದಿನಾಂಕ: 05-01-2023 ರಿಂದ 31-01-2023ರವರೆಗೆ ಮೂರನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನವನ್ನು ಪಲ್ಸ್ ಪೋಲಿಯೋ ಮಾದರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಹೆಚ್.ವಿ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ (ಜ.4) ನಡೆದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಮೂರನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ 20ನೇ ಜಾನುವಾರು ಗಣತಿಯ ಪ್ರಕಾರ ಹಸು, ಎತ್ತು, ಎಮ್ಮೆ, ಕರುಗಳ ಒಟ್ಟು ಸಂಖ್ಯೆ 13,93,711 ಇದ್ದು, ಪ್ರತಿಯೊಂದು ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಅದಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 964 ಲಸಿಕೆದಾರರನ್ನೊಳಗೊಂಡ 482 ಲಸಿಕಾ ತಂಡಗಳನ್ನು ರಚಿಸಲಾಗಿದೆ. ಆ ಲಸಿಕೆದಾರರು ದಿನಾಂಕ: 05-01-2023 ರಿಂದ 31-01-2023ರ ವರೆಗೆ 10641 ಬ್ಲಾಕ್‌ಗಳಲ್ಲಿ ಇರುವ 13 ಲಕ್ಷ ಜಾನುವಾರುಗಳಿಗೆ ಕಾಲು ಬಾಯಿ ರೋಗದ ವಿರುದ್ಧ ಲಸಿಕೆಯನ್ನು ಹಾಕಲಾಗುವುದೆಂದು ಡಾ: ರಾಜೀವ ಎನ್.‌ ಕೂಲೇರ, ಉಪ ನಿರ್ದೇಶಕರು(ಆಡಳಿತ) ಇವರು ಸಭೆಯಲ್ಲಿ ತಿಳಿಸಿದರು.

ಈಗಾಗಲೇ ಪ್ರತಿ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ತರಬೇತಿ ಹೊಂದಿರುವ ಪಶು ಸಖಿಯರನ್ನೂ ಸಹ ಈ ಲಸಿಕಾ ಅಭಿಯಾನದಲ್ಲಿ ಕಾರ್ಯಕ್ರಮದ ಕುರಿತು ಪ್ರಚುರ ಪಡಿಸಲು ಅವರ ಸೇವೆಯನ್ನು ಬಳಸಿಕೊಳ್ಳಲು ಸಹ ಮುಖ್ಯ ಕಾರ್ಯನಿರ್ವಾಹಕರ ಅಧಿಕಾರಿಗಳು ಉಪ ನಿರ್ದೇಶಕರು(ಆಡಳಿತ) ಇವರಿಗೆ ತಿಳಿಸಿದರು.

ಸದ್ಯಕ್ಜೆ ಜಿಲ್ಲೆಯಲ್ಲಿ 13,31,950 ಡೋಜ್‌ಗಳಷ್ಟು ಕಾಲು ಬಾಯಿ ಬೇನೆ ರೋಗದ ಲಸಿಕೆ ಲಭ್ಯವಿದ್ದು, ಸರಕಾರದ ಮಾರ್ಗಸೂಚಿ ಪ್ರಕಾರ ಒಬ್ಬ ಲಸಿಕದಾರ ಪ್ರತಿ ದಿನ ಒಂದು ಬ್ಲಾಕ್‌ ನಲ್ಲಿ 100 ರಿಂದ 120 ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆಯನ್ನು ನೀಡಲಾಗುವುದು ಎಂದು ತಿಳಿಸಿದರು.

 


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ :

Spread the loveಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ