ಬೆಂಗಳೂರು: ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿಯವರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಇತ್ತೀಚೆಗೆ ಕೊರೊನಾ ಸೋಂಕು ರಾಜಕಾರಣಿಗಳನ್ನು ಬೆನ್ನು ಬಿಡದೆ ಕಾಡುತ್ತಿದೆ. ಇತ್ತೀಚೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೂ ಕೂಡ ಕೊರೊನಾ ಪಾಸಿಟಿವ್ ಬಂದಿತ್ತು. ಈಗ ಕೇಂದ್ರ ಸಚಿವರಿಗೂ ಕೊರೊನಾ ಪಾಸಿಟಿವ್ ಬಂದಿದ್ದು, ತಮಗೆ ಕೊರೊನಾ ಸೋಂಕು ತಗಲಿರುವ ಸುದ್ದಿಯನ್ನು ಸ್ವತಃ ಸಚಿವರೇ ಟ್ವೀಟ್ ಮಾಡಿ ಖಚಿತ ಪಡಿಸಿದ್ದಾರೆ.
ಸೋಂಕು ತಗುಲಿರುವ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಹ್ಲಾದ್ ಜೋಶಿಯವರು, ಆತ್ಮೀಯರೇ ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವುದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಕೇಂದ್ರ ಸಚಿವ ಸುರೇಶ್ ಅಂಗಡಿಯವರು ಕೂಡ ಕೊರೊನಾ ಚಿಕಿತ್ಸೆ ಫಲಿಸದೇ ವಿಧವಶರಾಗಿದ್ದರು
Laxmi News 24×7