ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಬುಧವಾರ ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈವರೆಗೆ ಬಂಧಿತರಾದವರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ.
ಗೋಕಾಕ ತಾಲ್ಲೂಕಿನ ಮಲ್ಲಾಪುರ ಪಿ.ಜಿ.
ಗ್ರಾಮದ ಅಣ್ಣಪ್ಪ ಕೆಂಪಣ್ಣ ಮಾರವಾಡಿ(31), ಶಿವಾಪುರದ ಜಾನ್‌ರಾಬರ್ಟ್ ಯಶವಂತ ಬಂಗೆನ್ನವರ(26), ಮೂಡಲಗಿ ತಾಲ್ಲೂಕಿನ ರಾಜಾಪುರದ
ಚಿದಾನಂದ ಚಿನ್ನಪ್ಪ ಮಾಡಲಗಿ(27) ಬಂಧಿತರು.
‘ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್ ಬಳಸಿ, ಮೂವರು ಆರೋಪಿಗಳು ಪರೀಕ್ಷೆ ಬರೆದಿದ್ದರು. ಅವರಿಂದ ಅಕ್ರಮಕ್ಕೆ ಬಳಸಿದ ಎಲ್ಲ ಸಾಮಗ್ರಿಗಳ ವಶಕ್ಕೆ ಪಡೆಯಲಾಗಿದೆ. ಎಲ್ಲ ಆರೋಪಿತರು ನ್ಯಾಯಾಂಗ ಬಂಧನದಲ್ಲಿದ್ದಾರೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ ತಿಳಿಸಿದ್ದಾರೆ.
Laxmi News 24×7