Breaking News
Home / ಜಿಲ್ಲೆ / ಚಾಮರಾಜ ನಗರ / ಮನೆಗೆ ಕನ್ನ ಹಾಕಿ ಮೋಜು-ಮಸ್ತಿ ಮಾಡುತ್ತಿದ್ದ ಯುವಕರನ್ನು ಬಂಧಿಸಿದ್ ಪೊಲೀಸರು

ಮನೆಗೆ ಕನ್ನ ಹಾಕಿ ಮೋಜು-ಮಸ್ತಿ ಮಾಡುತ್ತಿದ್ದ ಯುವಕರನ್ನು ಬಂಧಿಸಿದ್ ಪೊಲೀಸರು

Spread the love

ಚಾಮರಾಜನಗರ: ಶೋಕಿಗಾಗಿ ವೃದ್ಧೆಯ ಮನೆಗೆ ಕನ್ನ ಹಾಕಿ ಮೋಜು-ಮಸ್ತಿ ಮಾಡುತ್ತಿದ್ದ ಯುವಕರನ್ನು ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ ಮನು (21), ಕಿರಣ್ (20) ಬಂಧಿತ ಆರೋಪಿಗಳು. ಗುಂಡ್ಲುಪೇಟೆಯ ನಾಯಕರ ಬೀದಿಯಲ್ಲಿ ವಾಸವಿದ್ದ ಬಸಮ್ಮ (70) ವೃದ್ಧೆಯ ಮನೆಗೆ ಕನ್ನ ಹಾಕಿ ಬೀರುವಿನ್ನಲ್ಲಿದ್ದ ಓಲೆ, ಕಾಸು, ಚಿನ್ನದ ಉಂಗುರ ಸೇರಿದಂತೆ 60 ಗ್ರಾಂ ಚಿನ್ನಾಭರಣವನ್ನು ಎಗರಿಸಿ ಪರಾರಿಯಾಗಿದ್ದರು.

ಅಕ್ಟೋಬರ್ 6ರಂದು ವೃದ್ಧೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಂದು ಆರೋಪಿಗಳನ್ನು ಬಂಧಿಸಿ 60 ಗ್ರಾಂ ಚಿನ್ನಾಭರಣ, ಕಾರನ್ನು ವಶಪಡಿಸಿಕೊಂಡು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


Spread the love

About Laxminews 24x7

Check Also

ವಸತಿ ಶಾಲೆಯೊಂದರಿಂದ 300ಕ್ಕೂ ಹೆಚ್ಚು ಬಾಲಕಿಯರನ್ನು ಬಂದೂಕುಧಾರಿಗಳು ಶುಕ್ರವಾರಅಪಹರಿಸಿದ್ದಾರೆ.

Spread the loveಲಾಗೋಸ್‌: ಉತ್ತರ ನೈಜೀರಿಯಾದ ವಸತಿ ಶಾಲೆಯೊಂದರಿಂದ 300ಕ್ಕೂ ಹೆಚ್ಚು ಬಾಲಕಿಯರನ್ನು ಬಂದೂಕುಧಾರಿಗಳು ಶುಕ್ರವಾರಅಪಹರಿಸಿದ್ದಾರೆ. ಜಂಗೆಬೆ ಪಟ್ಟಣದಲ್ಲಿರುವ ಬಾಲಕಿಯರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ