Breaking News

ರಾಜ್ಯದಲ್ಲಿ ಮತ್ತೆ ಐಟಿ ಸದ್ದು; ಮಾಜಿ ಸಚಿವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ

Spread the love

ಚಿತ್ರದುರ್ಗ: ರಾಜ್ಯದಲ್ಲಿ ಆಗಾಗ ಕೇಳಿ ಬರುತ್ತಿರುವ ಐಟಿ ಸದ್ದು ಮತ್ತೊಮ್ಮೆ ಮೊಳಗಿದೆ. ಅರ್ಥಾತ್, ರಾಜ್ಯದ ಮಾಜಿ ಸಚಿವರೊಬ್ಬರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಐಟಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.

 

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಪಾಡಿಗಟ್ಟೆ ಗ್ರಾಮದಲ್ಲಿನ ಜಿಲ್ಲಾ ಕಾಂಗ್ರೆಸ್​ ಕಾರ್ಯದರ್ಶಿ ಪಾಡಿಗಟ್ಟೆ ಸುರೇಶ್ ಮತ್ತು ಆತನ ಸಹೋದರ, ಗುತ್ತಿಗೆದಾರನೂ ಆಗಿರುವ ತಿಪ್ಪೇಸ್ವಾಮಿ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುರೇಶ್ ಮಾಜಿ ಸಚಿವ ಎಚ್. ಆಂಜನೇಯ ಅವರ ಆಪ್ತ.

ಆದಾಯ ತೆರಿಗೆ ಅಧಿಕಾರಿಗಳ ತಂಡ ಹುಬ್ಬಳ್ಳಿಯಿಂದ ಬಂದು ದಾಳಿ ನಡೆಸಿದ್ದು, ಸುರೇಶ್ ಮನೆಯಲ್ಲಿ ಜಾಲಾಡಿದೆ. ಆದಾಯಕ್ಕೆ ಮೀರಿದ ಹಣ, ಆಸ್ತಿ ಗಳಿಕೆ ಮಾಹಿತಿಯ ಹಿನ್ನೆಲೆಯಲ್ಲಿ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಏಕಕಾಲಕ್ಕೆ ಪಿಡಿಒಗಳಿಗೆ ಗ್ರೂಪ್‌ ‘ಬಿ’ಗೆ ಬಡ್ತಿ ನೀಡಲು ಆಗ್ರಹ

Spread the loveಚಿತ್ರದುರ್ಗ: ’16 ವರ್ಷಗಳಿಂದಲೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಬಡ್ತಿಯಿಲ್ಲದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದ್ದರಿಂದ ಏಕಕಾಲಕ್ಕೆ ಗ್ರೂಪ್‌ ‘ಬಿ’ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ