Home / ರಾಜಕೀಯ / ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ ಕೃಷ್ಣ

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ ಕೃಷ್ಣ

Spread the love

ಬೆಂಗಳೂರು : ಮಾಜಿ ಸಿಎಂ ಎಸ್.ಎಂ ಕೃಷ್ಣ ( S.M Krishna) ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಎಸ್ ಎಂ ಕೃಷ್ಣ ನಾನು ಹೆಚ್ಚಾಗಿ ರಾಜಕೀಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ.

90 ವರ್ಷದ ವಯಸ್ಸಿನಲ್ಲಿ 50 ವರ್ಷದ ವ್ಯಕ್ತಿ ಹಾಗೆ ನಟಿಸೋಕೆ ಆಗುತ್ತಾ..? ಆದ್ದರಿಂದ ರಾಜಕೀಯ ಜೀವನಕ್ಕೆ ಗುಡ್ ಬೈ ಹೇಳುವ ಬಗ್ಗೆ ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ. ವಯಸ್ಸಿನ ಕಾರಣದಿಂದ ಸಾರ್ವಜನಿಕ ಜೀವನದಿಂದ ದೂರ ಇದ್ದೇನೆ, ಹಾಗಾಗಿ ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಎಸ್.ಎಂ ಕೃಷ್ಣ 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯು ಸಹ ಕಾರ್ಯ ನಿರ್ವಹಿಸಿದ್ದಾರೆ. ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ ೨೦೧೭ ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು 1999 ರಿಂದ 2004 ರವರೆಗೆ ಕರ್ನಾಟಕದ 16 ನೇ ಮುಖ್ಯಮಂತ್ರಿಯಾಗಿದ್ದರು ಮತ್ತು 2004 ರಿಂದ 2008 ರವರೆಗೆ ಮಹಾರಾಷ್ಟ್ರದ 19 ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ 1989 ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ